ಮತ ಕಳೆದುಕೊಳ್ಳುವ ಭೀತಿಯಿಂದ ಹಿಂದಿನ ಸರ್ಕಾರ ತ್ರಿವಳಿ ತಲಾಖ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿಲ್ಲ: ಮೋದಿ

ತ್ರಿವಳಿ ತಲಾಖ್ ಮಸೂದೆಯನ್ನು ರಾಜ್ಯಸಭೆಯಲ್ಲಿ ತಡೆದ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ...
ನರೇಂದ್ರ ಮೋದಿ
ನರೇಂದ್ರ ಮೋದಿ
ತಲ್ಚೆರ್(ಒಡಿಶಾ): ತ್ರಿವಳಿ ತಲಾಖ್ ಮಸೂದೆಯನ್ನು ರಾಜ್ಯಸಭೆಯಲ್ಲಿ ತಡೆದ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಸ್ಲಿಂ ಮತ ಕಳೆದುಕೊಳ್ಳುವ ಭೀತಿಯಿಂದ ಈ ಹಿಂದಿನ ಯುಪಿಎ ಸರ್ಕಾರ ತ್ರಿವಳಿ ತಲಾಖ್ ನಿಷೇಧದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ಆರೋಪಿಸಿದ್ದಾರೆ.
ತಲ್ಚೆರ್ ಪರ್ಟಿಲೈಸರ್ ಪ್ಲಾಂಟ್ ಗೆ ಶಂಕು ಸ್ಥಾಪನೆ ಮಾಡಿ ಮಾತನಾಡಿದ ಮೋದಿ, ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದರೂ ನಾವು ಮುಸ್ಲಿಂ ಸಹೋದರಿಯರಿಗೆ ಮತ್ತು ಹೆಣ್ಣುಮಕ್ಕಳಿಗೆ ಸಾಮಾಜಿಕ ನ್ಯಾಯಕೊಡಿಸಲು ಬದ್ಧವಾಗಿದ್ದೇವೆ ಎಂದರು.
ಮುಸ್ಲಿಮರ ಮತ ಕಳೆದುಕೊಳ್ಳುವ ಭೀತಿಯಿಂದ ತ್ರಿವಳಿ ತಲಾಖ್ ನಿಷೇಧ ಮಾತು ಬಿಡಿ, ಅದರ ಬಗ್ಗೆ ಮಾತನಾಡಲೂ ಯಾರು ಸಿದ್ಧರಿಲ್ಲ ಎಂದು ಮೋದಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ಅವರು, ಈ ಯೋಜನೆ ದೇಶದ ಕೋಟ್ಯಾಂತರ ಜನರಿಗೆ ಆರೋಗ್ಯ ವಿಮೆ ಒದಗಿಸಲಿದೆ ಎಂದರು.
ಕೇಂದ್ರ ಸಚಿವ ಸಂಪುಟ ಕಳೆದ ಬುಧವಾರ ತ್ರಿವಳಿ ತಲಾಖ್ ನಿಷೇಧಿಸುವ ಹಾಗೂ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು  ಅನುಮೋದನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com