ಯುಪಿಎ ಅವಧಿಯಲ್ಲೇ ರಿಲಯನ್ಸ್, ಡಸಾಲ್ಟ್ ಡೀಲ್: ಬಿಜೆಪಿ

ರಾಫೆಲ್ ಡೀಲ್ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಕಳ್ಳ' ಎಂದ ಕಾಂಗ್ರೆಸ್...
ರವಿಂಶಕರ್ ಪ್ರಸಾದ್
ರವಿಂಶಕರ್ ಪ್ರಸಾದ್
ನವದೆಹಲಿ: ರಾಫೆಲ್ ಡೀಲ್ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಕಳ್ಳ' ಎಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇದೊಂದು ನಾಚಿಕೆಗೇಡಿನ ಮತ್ತು ಬೇಜವಾಬ್ದಾರಿ ಹೇಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಪ್ರಧಾನಿ ವಿರುದ್ಧ ಯಾವುದೇ ಪಕ್ಷದ ಅಧ್ಯಕ್ಷರು ಇದುವರೆಗೂ ಅಂತಹ ಪದ ಬಳಸಿಲ್ಲ. 2012ರಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗಲೇ ರಿಲಯನ್ಸ್ ಡಿಫೆನ್ಸ್ ಮತ್ತು ಡಸಾಲ್ಟ್ ಏವಿಯೇಷನ್ ಒಪ್ಪಂದ ಮಾಡಿಕೊಂಡಿವೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಹೇಳಿದ್ದಾರೆ.
ರಾಫೆಲ್ ಡೀಲ್ ಅನ್ನು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒಪ್ಪಿಸಬೇಕು ಎಂಬ ಕಾಂಗ್ರೆಸ್ ಬೇಡಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಸಚಿವರು, ತಿಳುವಳಿಕೆ ಇಲ್ಲದ ಪ್ರತಿಪಕ್ಷದ ನಾಯಕನ ತೃಪ್ತಿಪಡಿಸಲು  ಜಂಟಿ ಸಂಸದೀಯ ಸಮಿತಿ ತನಿಖೆಗೆ ಒಪ್ಪಿಸಲು ಸಾಧ್ಯವಿಲ್ಲ ಎಂದರು.
ರಾಹುಲ್ ಗಾಂಧಿ ಅವರು ಪಾಕಿಸ್ತಾನ ಮತ್ತು ಚೀನಾದಿಂದ ರಾಫೆಲ್ ಯುದ್ಧ ವಿಮಾನಕ್ಕೆ ಸಂಬಂಧಿಸಿದ ಮಾಹಿತಿ ಪಡೆದು ಆಟವಾಡುತ್ತಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಅವರು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com