2019 ರಲ್ಲಿ ನಮ್ಮನ್ನು ಮತ್ತೆ ಅಧಿಕಾರಕ್ಕೆ ತನ್ನಿ, ದೇಶಾದ್ಯಂತ ಇರುವ ಅಕ್ರಮ ವಲಸಿಗರನ್ನು ಪತ್ತೆ ಮಾಡುತ್ತೇವೆ: ಅಮಿತ್ ಶಾ

2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಇರುವ ಅಕ್ರಮ ವಲಸಿಗರನ್ನು ಪತ್ತೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ
ನವದೆಹಲಿ: 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಇರುವ ಅಕ್ರಮ ವಲಸಿಗರನ್ನು ಪತ್ತೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 
ದೆಹಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ಪೂರ್ವಾಂಚಲ ಮಹಾಕುಂಭದಲ್ಲಿ ಭಾಗವಹಿಸಿ ಮಾತನಾಡಿರುವ ಅಮಿತ್ ಶಾ, ರಾಹುಲ್ ಗಾಂಧಿ, ಕೇಜ್ರಿವಾಲ್ ಅಕ್ರಮ ವಲಸಿಗರನ್ನು ರಕ್ಷಿಸಿ,  ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಅಕ್ರಮ ವಲಸಿಗರನ್ನು ಗೆದ್ದಲು ಹುಳಗಳಿಗೆ ಹೋಲಿಕೆ ಮಾಡಿರುವ ಅಮಿತ್ ಶಾ, ದೆಹಲಿಯಲ್ಲಿ ಈ ರೀತಿಯ ಅಕ್ರಮ ವಲಸಿಗರು ಸಮಸ್ಯೆ ಉಂಟುಮಾಡುತ್ತಿದ್ದಾರೆ. 2019 ರಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸಿದ ನಂತರ ರಾಷ್ಟ್ರಾದ್ಯಂತ ಅಕ್ರಮ ವಲಸಿಗರನ್ನು ಪತ್ತೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. 
ದೇಶಕ್ಕೆ ಸಮಸ್ಯೆ ಉಂಟುಮಾಡುತ್ತಿರುವ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಂಡರೆ ದೇಶಪ್ರೇಮಿಗಳಿಗೆ ಆತಂತ ಉಂಟಾಗುವುದಿಲ್ಲ, ಆದರೆ ಅಕ್ರಮ ವಲಸಿಗರ ವಿರುದ್ಧ ನಾವು ಯಾವುದೇ ಕ್ರಮ ಕೈಗೊಂಡರೂ ರಾಹುಲ್ ಗಾಂಧಿ, ಕೇಜ್ರಿವಾಲ್ ನಮ್ಮ ಸರ್ಕಾರವನ್ನು ದೂರಲು ಪ್ರಾರಂಭಿಸುತ್ತಾರೆ. ಅಕ್ರಮ ವಲಸಿಗರ ಬಗ್ಗೆ ರಾಹುಲ್ ಗಾಂಧಿ, ಕೇಜ್ರಿವಾಲ್ ಓಟ್ ಬ್ಯಾಂಕ್ ಗಾಗಿ ಕಾಳಜಿ ವಹಿಸುತ್ತಾರೆ ಎಂದು ಅಮಿತ್ ಶಾ ಆರೋಪಿಸಿದ್ದು, ಈ ವಿಷಯದಲ್ಲಿ ಇಬ್ಬರೂ ನಾಯಕರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com