

ಕುಪ್ವಾರ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಸೆಕ್ಟರ್ ನಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ವಿಫಲಗೊಳಿಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂಬುದು ತಿಳಿದುಬಂದಿದೆ. ಪುಲ್ವಾಮಾ ಜಿಲ್ಲೆಯ ಮಿರ್ ಮೊಹಲ್ಲಾ ಏರ್ ಪಾಲ್ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಹಲವು ತಾಸುಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.