ಮನೋಹರ್ ಪರಿಕ್ಕರ್ ಗೋವಾ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ: ಅಮಿತ್ ಶಾ

ಗೋವಾ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಎಲ್ಲಾ ಗೊಂದಲಗಳಿಗೂ ಬಿಜೆಪಿ ತೆರೆ ಎಳೆದಿದ್ದು, ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
Updated on: 
ನವದೆಹಲಿ: ಗೋವಾ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಎಲ್ಲಾ ಗೊಂದಲಗಳಿಗೂ ಬಿಜೆಪಿ ತೆರೆ ಎಳೆದಿದ್ದು, ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ. 
ಗೋವಾಗೆ ಸಂಬಂಧಿಸಿದಂತೆ ಪಕ್ಷದ ಕೋರ್ ಕಮಿಟಿ ಸಭೆ ನಂತರ ಟ್ವೀಟ್ ಮೂಲಕ ಮಾಹಿತಿ ನೀಡಿರುವ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಅವರೇ ಮುಂದುವರೆಯಲಿದ್ದಾರೆ, ಸಧ್ಯದಲ್ಲೇ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. 
ಮನೋಹರ್ ಪರಿಕ್ಕರ್  ದೀರ್ಘಾವಧಿ ಅನಾರೋಗ್ಯ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂದಿತ್ತು. ಪರಿಸ್ಥಿತಿಯ ಲಾಭ ಪಡೆದು ಗೋವಾದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಸಹ ಸಾಕಷ್ಟು ಪ್ರಯತ್ನ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಇತ್ತೀಚೆಗಷ್ಟೇ ಗೋವಾ ಮಿತ್ರಪಕ್ಷಗಳೊಂದಿಗೆ ಮಾತುಕತೆ ನಡೆಸುವುದಕ್ಕಾಗಿ ಕೇಂದ್ರದ ನಾಯಕರನ್ನು ಗೋವಾಗೆ ಕಳಿಸಿದ್ದರು. ಆದರೆ ಈಗ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ಬಿಜೆಪಿ ಮನೋಹರ್ ಪರಿಕ್ಕರ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರೆಸಲು ತೀರ್ಮಾನಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com