ಮಧ್ಯಪ್ರದೇಶ: 50 ವರ್ಷಕ್ಕೂ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗೆ ಮಾಸಿಕ ಪಿಂಚಣಿ !

ಮುಂಬರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಶಿವರಾಜ್ ಸಿಂಗ್ ಚೌಹ್ಹಾಣ್ ಸರ್ಕಾರ 50 ವರ್ಷಕ್ಕೂ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗೆ ಮಾಸಿಕ ಪಿಂಚಣಿ ಯೋಜನೆಯನ್ನು ಅನುಮೋದಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೂಪಾಲ್ : ಮುಂಬರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಶಿವರಾಜ್ ಸಿಂಗ್ ಚೌಹ್ಹಾಣ್ ಸರ್ಕಾರ 50 ವರ್ಷಕ್ಕೂ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗೆ ಮಾಸಿಕ ಪಿಂಚಣಿ ಯೋಜನೆಯನ್ನು ಅನುಮೋದಿಸಿದೆ.

ಶಿವರಾಜ್ ಸಿಂಗ್ ಚೌಹ್ಹಾಣ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಮಾಜಕಲ್ಯಾಣ ಮತ್ತು ದಿವ್ಯಾಂಗರ ಕಲ್ಯಾಣ ಇಲಾಖೆಯಿಂದ ಅವಿವಾಹಿತ ಮಹಿಳೆಯರಿಗೆ ಪಿಂಚಣಿ ಯೋಜನೆಗೆ ಪ್ರಾರಂಭಿಸುವ ಪ್ರಸ್ತಾವಕ್ಕೆ ಸಮ್ಮತಿ ನೀಡಲಾಯಿತು.

ಈ ಯೋಜನೆಯಡಿ  50 ರಿಂದ 79 ವರ್ಷದೊಳಗಿನ ಅವಿವಾಹಿತ ಮಹಿಳೆಯರು  ಮಾಸಿಕ 300 ಹಾಗೂ 80 ಮತ್ತು ಅದಕ್ಕಿಂತಲೂ ಹೆಚ್ಚಿನ ವಯಸ್ಸಿನ ಮಹಿಳೆಯರು ಮಾಸಿಕ 500 ರೂ. ಪಿಂಚಣಿ ಪಡೆಯಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com