ಸಂಸದರು, ಶಾಸಕರು ಕಾನೂನು ಅಭ್ಯಾಸ ಮಾಡಬಹುದು: ಸುಪ್ರೀಂ ಕೋರ್ಟ್

ಚುನಾವಣೆಗಳಲ್ಲಿ ಕಳಂಕಿತ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್...
ದೀಪಕ್ ಮಿಶ್ರಾ
ದೀಪಕ್ ಮಿಶ್ರಾ
ನವದೆಹಲಿ: ಚುನಾವಣೆಗಳಲ್ಲಿ ಕಳಂಕಿತ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಇದೇ ವೇಳೆ ಸಂಸದರು, ಶಾಸಕರು ಕಾನೂನು ಅಭ್ಯಾಸ ಮಾಡಬಹುದು ಎಂದು ಹೇಳಿದ್ದಾರೆ. 
ಜುಲೈ 9ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎಂಎಂ ಖಾನ್ವಾಲಿಕರ್ ಮತ್ತು ಡಿವೈ ಚಂದ್ರಚೂಡ್ ಅವರು ಕಳಂಕಿತ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಹೇರಬೇಕೆಂಬ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ತೀರ್ಪು ನೀಡಿರುವ ನ್ಯಾಯಾಧೀಶರು ರಾಜಕಾರಣಿಗಳನ್ನು ನಿರ್ಬಂಧಿಸುವ ಅಧಿಕಾರ ಸುಪ್ರೀಂಕೋರ್ಟ್ ಗೆ ಇಲ್ಲ ಎಂದು ಹೇಳಿದ್ದಾರೆ. 
ಕಳಂಕಿತ ರಾಜಕಾರಣಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು. ಅಲ್ಲದೆ ಶಾಸಕಾಂಗದಲ್ಲಿರುವವರು(ಸಂಸದರು, ಶಾಸಕರು, ಪರಿಷತ್ ಸದಸ್ಯರು) ಕಾನೂನು ಅಭ್ಯಾಸ ಮಾಡುವುದನ್ನು ಅನರ್ಹಗೊಳಿಸಬೇಕು ಎಂದು ಬಿಜೆಪಿ ಮುಖಂಡೆ ಮತ್ತು ವಕೀಲರಾದ ಅಶ್ವಿನಿ ಉಪಾಧ್ಯಾಯ್ ಎಂಬುವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. 
ಕಳಂಕಿತ ರಾಜಕಾರಣಿಗಳ ಸ್ಪರ್ಧೆ ಕುರಿತಂತೆ ಸಂಸತ್ ನಲ್ಲಿ ನಿರ್ಧಾರ ಕೈಗೊಳ್ಳಬೇಕು. ಈ ಕುರಿತು ಕಾನೂನು ರೂಪಿಸಬೇಕು. ಇನ್ನು ಜನರೇ ರಾಜಕಾರಣಿಗಳ ಹಣೆಬರಹ ನಿರ್ಧರಿಸಬೇಕು. ಕಳಂಕ ರಹಿತ ಅಭ್ಯರ್ಥಿಗಳನ್ನು ಚುನಾಯಿಸುವ ಅಧಿಕಾರ ಮತದಾರರಿಗಿರುವುದರಿಂದ ಅವರೇ ಉತ್ತಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಹೇಳಿದರು. 
ಇನ್ನು ಕಳಂಕಿತ ರಾಜಕೀಯ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸುವ ಮುನ್ನ ತಮ್ಮ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಬೇಕು. ಮತದಾರರಿಗೆ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಕೇಸ್ ಗಳ ಕುರಿತು ಮಾಧ್ಯಮ, ಸಾಮಾಜಿಕ ಜಾಲಾತಣಗಳ ಮೂಲಕ ಮಾಹಿತಿ ನೀಡಬೇಕು ಎಂದರು. 
ಭ್ರಷ್ಟಾಚಾರ ಒಂದು ರಾಷ್ಟ್ರೀಯ ಆರ್ಥಿಕ ಭಯೋತ್ಪಾದನೆಯಾಗಿದೆ. ಇದನ್ನು ಮಟ್ಟ ಹಾಕುವುದು ಮತದಾರರ ಕೈಯಲ್ಲಿದೆ. ಸುಪ್ರಿಂಕೋರ್ಟ್ ಕಳಂಕಿತ ಅಭ್ಯರ್ಥಿಗಳು ಸ್ಪರ್ಧಿಸದಂತೆ ಅನರ್ಹಗೊಳಿಸುವುದಿಲ್ಲ. ಅನರ್ಹಗೊಳಿಸುವುದನ್ನು ಮಾನದಂಡವಾಗಿಸಲು ಸಾಧ್ಯವಿಲ್ಲ ಎಂದು ದೀಪಕ್ ಮಿಶ್ರಾ ಹೇಳಿದ್ದಾರೆ. 
ಚುನಾವಣೆಗಳಲ್ಲಿ ಕಳಂಕಿತ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ತೀರ್ಪು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com