ಗಡಿಯಲ್ಲಿರುವ ಉಗ್ರರ ಹುಟ್ಟಡಗಿಸಲು ಮತ್ತೊಂದು ಸರ್ಜಿಕಲ್ ದಾಳಿ ನಡೆಸಬೇಕು: ಬಿಪಿನ್ ರಾವತ್

ಗಡಿ ನಿಯಂತ್ರಣ ರೇಖೆಯಲ್ಲಿದ್ದುಕೊಂಡು ಭಾರತದ ಮೇಲೆ ವಿಧ್ವಂಸಕ ದಾಳಿ ನಡೆಸಲು ಹೊಂಚು ಹಾಕಿ ಕೂತಿರುವ ಉಗ್ರರ ವಿರುದ್ಧ ಮತ್ತೊಂದು ಸರ್ಜಿಕಲ್ ದಾಳಿಯ ಅವಶ್ಯಕತೆ ಇದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್
ಸೇನಾ ಮುಖ್ಯಸ್ಥ ಬಿಪಿನ್ ರಾವತ್
ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿದ್ದುಕೊಂಡು ಭಾರತದ ಮೇಲೆ ವಿಧ್ವಂಸಕ ದಾಳಿ ನಡೆಸಲು ಹೊಂಚು ಹಾಕಿ ಕೂತಿರುವ ಉಗ್ರರ ವಿರುದ್ಧ ಮತ್ತೊಂದು ಸರ್ಜಿಕಲ್ ದಾಳಿಯ ಅವಶ್ಯಕತೆ ಇದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಮಾತನಾಡಿರುವ ರಾವತ್,  ಮ್ಮು ಕಾಶ್ಮೀರದ ಸದ್ಯದ ಪರಿಸ್ಥಿತಿ ಹಿನ್ನೆಲೆಯಲ್ಲಿ ವಾಸ್ತವ ನಿಯಂತ್ರಣ ರೇಖೆಯ ಸನಿಹದಲ್ಲಿರುವ ಉಗ್ರರ ತಾಣಗಳ ಮೇಲೆ ಮತ್ತೊಂದು ಸರ್ಜಿಕಲ್ ದಾಳಿ ನಡೆಸುವುದು ಅಗತ್ಯ ಎಂದು ಎಚ್ಚರಿಕೆ ನೀಡಿದ್ದಾರೆ. 
ಮತ್ತೊಂದು ಸರ್ಜಿಕಲ್ ದಾಳಿ ಅಗತ್ಯವೇ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ರಾವತ್. 'ಮತ್ತೊಂದು ಅಂಥ ದಾಳಿ ಅಗತ್ಯ ಎನ್ನುವುದು ನನ್ನ ನಂಬಿಕೆ. ಆದರೆ ಅದನ್ನು ಹೇಗೆ ಮಾಡುತ್ತೇವೆ ಎನ್ನುವುದನ್ನು ಬಹಿರಂಗಪಡಿಸುವುದಿಲ್ಲ' ಎಂದು ಹೇಳಿದರು. ಈ ಮಧ್ಯೆ ಪಾಕಿಸ್ತಾನದ ಜತೆಗೆ ದ್ವಿಪಕ್ಷೀಯ ಮಾತುಕತೆಯನ್ನು ಹಿಂಪಡೆಯುವಂತೆ ಕರೆ ನೀಡಿರುವ ಸರ್ಕಾರದ ಕ್ರಮವನ್ನು ರಾವತ್ ಸ್ವಾಗತಿಸಿದ್ದಾರೆ. 
ಭಾರತ ಹಾಗೂ ಪಾಕಿಸ್ತಾನದ ವಿದೇಶಾಂಗ ಸಚಿವರ ನಡುವಿನ ನ್ಯೂಯಾರ್ಕ್ ಭೇಟಿಯನ್ನು ಭಾರತ ಶುಕ್ರವಾರ ರದ್ದುಪಡಿಸಿತ್ತು.  ಭಯೋತ್ಪಾದನೆ ಮತ್ತು ಮಾತುಕತೆ ಜತೆ ಜತೆಯಾಗಿ ಸಾಗಲು ಸಾಧ್ಯವಿಲ್ಲ ಎಂದು ಭಾರತ ಹೇಳಿತ್ತು. ಜಮ್ಮು ಕಾಶ್ಮೀರದಲ್ಲಿ ಉಗ್ರರು ಮೂವರು ಪೊಲೀಸರನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಮತ್ತು ಕಾಶ್ಮೀರಿ ಉಗ್ರ ಬುರ್ಹಾನ್ ವಾನಿಯನ್ನು ವೈಭವೀಕರಿಸುವ ಅಂಚೆ ಚೀಟಿ ಬಿಡುಗಡೆ ಮಾಡಿದ್ದನ್ನು ವಿರೋಧಿಸಿ ಭಾರತ ಈ ನಿರ್ಧಾರ ಕೈಗೊಂಡಿತ್ತು.
ಎರಡು ವರ್ಷಗಳ ಹಿಂದೆ ಸೆಪ್ಟೆಂಬರ್ 29ರಂದು ಉಗ್ರರ ತಾಣಗಳ ಮೇಲೆ ವಾಸ್ತವ ನಿಯಂತ್ರಣ ರೇಖೆಯಿಂದಾಚೆ ತೆರಳಿದ್ದ ಭಾರತೀಯ ಸೇನೆ ಸರ್ಜಿಕಲ್ ದಾಳಿ ನಡೆಸಿತ್ತು. ಈ ವೇಳೆ ಸುಮಾರು 60ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದರು. ಅಲ್ಲದೆ ಉಗ್ರರು ನಿರ್ಮಿಸಿಕೊಂಡಿದ್ದ ಹತ್ತಾರು ಬಂಕರ್ ಗಳು ನಾಶವಾಗಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com