ಬಿಹಾರ: ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ಆರು ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದು, ಇತರ ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ನಡೆದಿದೆ.
ಬೆಟ್ಟಿಯಾ ಪಟ್ಟಣದ ಖಾಸಗಿ ಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದಾಗ ಮೇಲ್ಛಾವಣಿ ಕುಸಿದು ಈ ಅವಘಡ ಉಂಟಾಗಿದೆ. ಆ ಸಂದರ್ಭದಲ್ಲಿ ಶಾಲೆಯಲ್ಲಿ 25 ರಿಂದ 30 ವಿದ್ಯಾರ್ಥಿಗಳಿದ್ದರು ಎಂದು ಪೊಲೀಸ್ ಅಧೀಕ್ಷಕ ಜಯಂತ್ ಕಾಂಟ್ ತಿಳಿಸಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಎಂಜೆಕೆ ವೈದ್ಯಕೀಯ ಕಾಲೇಜಿಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವಿದ್ಯಾರ್ಥಿಯನ್ನು ವೈಭವ್ ಕುಮಾರ್ ರಾಜ್ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.
ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ .ಶಾಲೆಯ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement