ಇನ್ನು ಇಂದಿನ ಪಂಚಸದಸ್ಯ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ ಎಕೆ ಸಿಕ್ರಿ, ನ್ಯಾ.ಎ ಎಂ ಖಾನ್ ವಿಲ್ಕರ್, ನ್ಯಾ.ಡಿ ವೈ ಚಂದ್ರಚೂಡ್, ನ್ಯಾ. ಅಶೋಕ್ ಭೂಷಣ್ ಅವರಿದ್ದರು. ಆಧಾರ್ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಐವರು ನ್ಯಾಯಮೂರ್ತಿಗಳಲ್ಲಿ ಮೂವರು ನ್ಯಾಯಮೂರ್ತಿಗಳು ಸಿಂಧುತ್ವವನ್ನು ಸ್ವಾಗತಿಸಿದ್ದರೆ, ಇನ್ನಿಬ್ಬರು ವಿರೋಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.