ಆಧಾರ್ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಸೇರಿದಂತೆ 24 ಮಂದಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನ ಪೀಠವು ಸುದೀರ್ಘ ಅವಧಿಯವರೆಗೆ ವಿಚಾರಣೆ ನಡೆಸಿದ್ದು, ಮೇ ತಿಂಗಳಿನಲ್ಲಿ ತೀರ್ಪು ಕಾಯ್ದಿರಿಸಿತ್ತು. ಇದೀಗ ಇಂದು ಈ ಪ್ರಕರಣದ ಅಂತಿಮ ತೀರ್ಪು ಹೊರ ಬೀಳಲಿದೆ.