ಮುಂದಿನ ಸಿಜೆಐ ನ್ಯಾ. ರಂಜನ್ ಗೊಗೊಯ್ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ

ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ...
ಸುದ್ದಿಗೋಷ್ಠಿಯಲ್ಲಿ ರಂಜನ್ ಗೊಗೊಯ್ (ಬಲಕ್ಕೆ)
ಸುದ್ದಿಗೋಷ್ಠಿಯಲ್ಲಿ ರಂಜನ್ ಗೊಗೊಯ್ (ಬಲಕ್ಕೆ)
ನವದೆಹಲಿ: ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ನ್ಯಾ.ರಂಜನ್ ಗೊಗೊಯ್ ನೇಮಕ ಪ್ರಶ್ನಿಸಿ ವಕೀಲರಿಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ವಜಾಗೊಳಿಸಿದ್ದು, ಇದು ಮಧ್ಯ ಪ್ರವೇಶಿಸುವ ಹಂತವಲ್ಲ ಎಂದು ಹೇಳಿದೆ.
ಹಾಲಿ ಸಿಜೆಐ ವಿರುದ್ಧ ಸುದ್ದಿಗೋಷ್ಠಿ ನಡೆಸಿದ ಸುಪ್ರೀಂ ಕೋರ್ಟ್ ಪರಂಪರೆ ಹಾಗೂ ಗೌರವಕ್ಕೆ ಚ್ಯುತಿ ತಂದಿದ್ದಾರೆ. ಆಂತರಿಕ ವಿಚಾರವನ್ನು ಬಹಿರಂಗಪಡಿಸಿದ ಇಂಥ ವ್ಯಕ್ತಿಯು ಸಿಜೆಐ ಹುದ್ದೆಗೆ ಅರ್ಹರಲ್ಲ ಎಂದು ವಕೀಲ ಆರ್.ಪಿ.ಲೂಥ್ರಾ ಹಾಗೂ ಸತ್ಯವೀರ್ ಶರ್ಮ ಅವರು ಅರ್ಜಿ ಸಲ್ಲಿಸಿದ್ದರು.
ಜ.12 ರಂದು ನವದೆಹಲಿಯಲ್ಲಿ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯಮೂರ್ತಿಗಳಾದ ನ್ಯಾ. ಕುರಿಯನ್ ಜೋಸೆಫ್, ನ್ಯಾ. ಜೆ ಚಲಮೇಶ್ವರ, ನ್ಯಾ. ರಂಜನ್ ಗೊಗೊಯ್ ಮತ್ತು ನ್ಯಾ. ಮದನ್ ಲೋಕೂರ್ ಸುದ್ದಿಗೋಷ್ಠಿ ಕರೆದಿದ್ದರು. ಈ ಸುದ್ದಿ ಗೋಷ್ಟಿಯಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವು ಹುಳುಕುಗಳಿವೆ ಎಂದು ಜರೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com