ಆಧಾರ್ ತೀರ್ಪು ಐತಿಹಾಸಿಕ, ತಂತ್ರಜ್ಞಾನ ನಿರಾಕರಿಸುವಂತಿಲ್ಲ: ಅರುಣ್ ಜೇಟ್ಲಿ

ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರಿಂ ಕೋರ್ಟ್‌ ತೀರ್ಪು ಅನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
ನವದೆಹಲಿ: ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರಿಂ ಕೋರ್ಟ್‌ ತೀರ್ಪು ಅನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ವಾಗತಿಸಿದ್ದು, ಇದೊಂದು ಐತಿಹಾಸಿಕ ತೀರ್ಪು ಎಂದು ಬಣ್ಣಿಸಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದ್ದು, ತಂತ್ರಜ್ಞಾನವನ್ನು ಯಾರೂ ನಿರಾಕರಿಸಲು ಸಾಧ್ಯವಿಲ್ಲ ಎಂದರು.
ಸುಪ್ರೀಂ ಕೋರ್ಟ್ ತೀರ್ಪನ್ನು ಕೇಂದ್ರ ಸರ್ಕಾರ ತುಂಬಿದ ಮನಸ್ಸಿನಿಂದ ಸ್ವಾಗತಿಸುತ್ತದೆ. ತಂತ್ರಜ್ಞಾನವನ್ನು ನಿರಾಕರಿಸುವಂತಿಲ್ಲ ಎಂಬುದನ್ನು ಆಧಾರ್ ಅನ್ನು ಟೀಕಿಸಿದ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು, ಆಧಾರ್ ಅನ್ನು ವಿರೋಧಿಸಿದ್ದವರ ಹಿಂದಿನ ಮರ್ಮವನ್ನು ಜನ ಅರಿತಿದ್ದಾರೆ ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದರು.
ಆಧಾರ್‌ ಅನ್ನು ಪರಿಚಯಿಸಿದ್ದ ಕಾಂಗ್ರೆಸ್‌ ತನ್ನನ್ನು ತಾನು ದೂಷಿಸಿಕೊಳ್ಳಬೇಕು. ಆಧಾರ್‌ ಅನ್ನು ಹೇಗೆ ಬಳಸಬೇಕು ಎಂಬುದು ಅವರಿಗೆ ಗೊತ್ತಿರಲಿಲ್ಲ. ಆದರೆ ನಮ್ಮ ಸರ್ಕಾರ ಆಧಾರ್‌ ಅನ್ನು ಪರಿಣಾಮಕಾರಿಯಾಗಿ ಬಳಸುತ್ತಿದೆ ಎಂದು ಜೇಟ್ಲಿ ವಾಗ್ದಾಳಿ ನಡೆಸಿದರು.
ಆಧಾರ್ ಮೂಲಕ ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಪತ್ತೆಹಚ್ಚುವ ಮೂಲಕ ನಾವು ಪ್ರತಿ ವರ್ಷ 90 ಸಾವಿರ ಕೋಟಿ ರುಪಾಯಿ ಉಳಿತಾಯ ಮಾಡುತ್ತಿದ್ದೇವೆ. ಆಧಾರ್ ಉತ್ತಮ ಆಡಳಿತದ ಸಾಧನ ಎಂದು ಸಚಿವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com