ನ್ಯಾಯಾಲಯಗಳ ಕಲಾಪ ನೇರ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕೋರ್ಟ್ ಕಲಾಪಗಳ ನೇರ ಪ್ರಸಾರಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ಅಸ್ತು ಎಂದಿದ್ದು, ಪಾರದರ್ಶಕ ವ್ಯವಸ್ಥೆಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ಕೋರ್ಟ್ ಕಲಾಪಗಳ ನೇರ ಪ್ರಸಾರಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ಅಸ್ತು ಎಂದಿದ್ದು, ಪಾರದರ್ಶಕ ವ್ಯವಸ್ಥೆಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ, ನ್ಯಾಯಾಲಯದಲ್ಲಿ ವಿಚಾರಣೆಗಳ ನೇರ ಪ್ರಸಾರಕ್ಕೆ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸುಂತೆ ಸರ್ಕಾರಕ್ಕೆ ಹೇಳಿದೆ.
ಸೂರ್ಯನ ಕಿರಣವೇ ಉತ್ತಮ ಕೀಟನಾಶ ಎಂಬ ಮಾತಿನಂತೆ, ಜನ ನೇರವಾಗಿ ಕೋರ್ಟ್ ನಲ್ಲಿ ಏನಾಗುತ್ತಿದೆ ಎಂಬ ಮಾಹಿತಿ ಪಡೆಯಲಿ. ಆ ಮೂಲಕ ಇಲ್ಲದ ಊಹೋಪೋಹಗಳನ್ನು ತಡೆಯಬಹುದಾಗಿದೆ. ಕೋರ್ಟ್ ಕಲಾಪ ನೇರ ಪ್ರಸಾರ ಸಂಬಂಧ ಸಾರ್ವಜನಿಕ ಹಕ್ಕುಗಳ ಸಮತೋಲನಕ್ಕೆ ಅಗತ್ಯ ನಿಯಮಗಳು ಮತ್ತು ದಾವೆದಾರರ ಘನತೆಯನ್ನು ರಕ್ಷಿಸುವ ಕುರಿತು ಶೀಘ್ರ ನಿಯಮ ರಚನೆಯಾಗುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಈ ಕುರಿತು ಸೂಕ್ತ ಮಾರ್ಗಸೂಚಿ ರೂಪಿಸುವಂತೆ ಸರ್ಕಾರಕ್ಕೆ ಹೇಳಿದೆ.
ಸಾರ್ವಜನಿತ ಹಿತಾಸಕ್ತಿ ದೃಷ್ಟಿಯಿಂದ ಮತ್ತು ಪಾರದರ್ಶಕತೆ ಇರಲಿ ಎಂಬ ಕಾರಣಕ್ಕೆ ಕೋರ್ಟ್ ಕಲಾಪಗಳ ನೇರ ಪ್ರಸಾರಕ್ಕೆ ಅನುಮತಿ ನೀಡುತ್ತಿದ್ದೇವೆ ಎಂದು ಪೀಠ ಹೇಳಿದೆ. ಆದರೆ ಅತ್ಯಾಚಾರ, ವೈವಾಹಿಕ ಮತ್ತಿತರ ವಿಚಾರಗಳಲ್ಲಿನ ಗೌಪ್ಯ ವಿಚಾರಣೆ ಹೊರತುಪಡಿಸಿ ನ್ಯಾಯಾಲಯ ಕಲಾಪಗಳ ನೇರ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ನ್ಯಾಯಾಲಯಗಳಲ್ಲಿ ವಿಚಾರಣೆಗಳ ನೇರ ವೀಕ್ಷಣೆ, ವಿಡಿಯೊ ರೆಕಾರ್ಡಿಂಗ್ ಅಥವಾ ನ್ಯಾಯಾಂಗ ಪ್ರಕ್ರಿಯೆಗಳ ಲಿಪ್ಯಂತರಗಳ ಕುರಿತು ಸಲ್ಲಿಸಲಾಗಿದ್ದ ಮನವಿ ಬಗ್ಗೆ ತನ್ನ ಅಭಿಪ್ರಾಯ ತಿಳಿಸುವಂತೆ ಸುಪ್ರೀಂ ಕೋರ್ಟ್ ಕಳೆದ ಮೇ 3ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಇದಕ್ಕೆ ಈ ಹಿಂದೆ ತನ್ನ ಅಭಿಪ್ರಾಯ ತಿಳಿಸಿದ್ದ ಸರ್ಕಾರ ಪರ ವಕೀಲ ಅಟಾರ್ನಿ ಜನರಲ್ ಕೆ ವೇಣುಗೋಪಾಲ್ ಅವರು ಹಲವು ದೇಶಗಳಲ್ಲಿ ನ್ಯಾಯಾಲಯ ಕಲಾಪಗಳ ನೇರ ವೀಕ್ಷಣೆ ಪದ್ಧತಿಯಿದೆ ಎಂದು ಹೇಳಿದ್ದರು.
ಅಂತೆಯೇ ನೇರ  ಪ್ರಸಾರ ಸುಮಾರು 70 ಸೆಕೆಂಡ್ ಗಳ ತಡವಾಗಿ ಮಾಧ್ಯಮಗಳಲ್ಲಿ ಪ್ರಸಾರವಾಗಬೇಕು ಎಂದು ವೇಣುಗೋಪಾಲ್ ಕೋರ್ಟ್ ಗೆ ಸಲಹೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com