ಆಧಾರ್ ಸಿಂಧುತ್ವ ಕುರಿತು ಇಂದು ತನ್ನ ಅಂತಿಮ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್ ಪಂಚ ಸದಸ್ಯರ ಸಾಂವಿಧಾನಿಕ ಪೀಠ, ನಕಲಿ ಆಧಾರ್ ಹೊಂದಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಬಗ್ಗೆ ತನ್ನ ಸುಮಾರು 40 ಪುಟಗಳ ತೀರ್ಪು ಓದಿರುವ ನ್ಯಾಯಮೂರ್ತಿ ಎಕೆ ಸಿಕ್ರಿ ಅವರು, ಆಧಾರ್ ನಕಲಿ ಸೃಷ್ಠಿ ಮಾಡಲು ಅವಕಾಶ ಇದ್ದರೆ ಅದನ್ನು ತಡೆಗಟ್ಟಿ, ಆಧಾರ್ ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.