ಸುಬ್ರಹ್ಮಣಿಯನ್ ಸ್ವಾಮಿ
ಸುಬ್ರಹ್ಮಣಿಯನ್ ಸ್ವಾಮಿ

ಅಯೋಧ್ಯೆಗೆ ಸಂಬಂಧಿಸಿದ ತೀರ್ಪು: ಅಂತಿಮ ತೀರ್ಪಿಗೆ ಮಾರ್ಗ ಮುಕ್ತವಾಗಿದೆ- ಸುಬ್ರಹ್ಮಣಿಯನ್ ಸ್ವಾಮಿ

ಅಯೋಧ್ಯೆಗೆ ಸಂಬಂಧಿಸಿದ ಮಸೀದಿ ಇಸ್ಲಾಂ ನ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಈ ತೀರ್ಪಿನಿಂದಾಗಿ
ನವದೆಹಲಿ: ಅಯೋಧ್ಯೆಗೆ ಸಂಬಂಧಿಸಿದ ಮಸೀದಿ ಇಸ್ಲಾಂ ನ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಈ ತೀರ್ಪಿನಿಂದಾಗಿ ಅಯೋಧ್ಯೆ ರಾಮ ಮಂದಿರ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪಿಗೆ ಮಾರ್ಗ ಮುಕ್ತವಾಗಿದೆ ಎಂದು ಹೇಳಿದ್ದಾರೆ. 
ಟೈಮ್ಸ್ ನೌ ವಾಹಿನಿಯೊಂದಿಗೆ ತೀರ್ಪಿನ ಬಗ್ಗೆ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಈ ತೀರ್ಪು ವಾಸ್ತವದಲ್ಲಿ ಗೆಲುವಲ್ಲ, ಆದರೆ ಈ ತೀರ್ಪಿನ ಆಧಾರದಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ಅಂತಿಮ ತೀರ್ಪಿಗೆ ಇದ್ದ ಅಡ್ಡಿ ನಿವಾರಣೆಯಾಗಿದೆ, ಪ್ರಾರ್ಥನೆ ಸಲ್ಲಿಸುವ ಹಕ್ಕು, ಆಸ್ತಿಯ ಹಕ್ಕಿಗಿಂತ ಹೆಚ್ಚು ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. 
ಅಯೋಧ್ಯೆ ರಾಮ ಜನ್ಮ ಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ತಮ್ಮ ಅರ್ಜಿಯ ವಿಚಾರಣೆಯನ್ನು ಪರಿಗಣಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡುವುದಾಗಿ ಸುಬ್ರಹ್ಮಣಿಯನ್ ಸ್ವಾಮಿ ಇದೇ ವೇಳೆ ಹೇಳಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com