ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪಿನ ಪರಿಶೀಲನೆ ಸಂಬಂಧ ಸೆ.27 ರಂದು ಮಹತ್ವದ ತೀರ್ಪು ಪ್ರಕಟಿಸಿರುವ ಮುಖ್ಯ ನ್ಯಾ. ದೀಪಕ್ ಮಿಶ್ರ, ಅಶೋಕ್ ಭೂಷನ್, ನ್ಯಾ. ನಜೀರ್ ಅವರಿದ್ದ ತ್ರಿಸದಸ್ಯ ಪೀಠದ ಪೈಕಿ ನ್ಯಾ. ಅಶೋಕ್ ಭೂಷಣ್ ಹಾಗೂ ನ್ಯಾ. ದೀಪಕ್ ಮಿಶ್ರಾ ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, 1994 ರ ಫಾರೂಕಿ ಪ್ರಕರಣದ ತೀರ್ಪನ್ನೇ ಎತ್ತಿ ಹಿಡಿದೆ. ಅಷ್ಟೇ ಅಲ್ಲದೇ 1994 ರ ಪ್ರಕರಣದ ತೀರ್ಪಿನ ಅಂಶಗಳನ್ನು ಪರಿಶೀಲಿಸಲು ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.