ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಗೆ ಕೇರಳ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ

ಇಸ್ರೊ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ವಿಜ್ಞಾನಿ ನಂಬಿ ನಾರಾಯಣನ್ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಿದ್ದಕ್ಕೆ ಅವರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ಕೇರಳ ಸಂಪುಟ ಸಭೆಯಲ್ಲಿ ಇಂದು ನಿರ್ಧಾರ ಕೈಗೊಳ್ಳಲಾಗಿದೆ.
ನಂಬಿ ನಾರಾಯಣನ್
ನಂಬಿ ನಾರಾಯಣನ್

ತಿರುವನಂತಪುರಂ: ಇಸ್ರೊ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ವಿಜ್ಞಾನಿ ನಂಬಿ ನಾರಾಯಣನ್  ವಿರುದ್ಧ ಸುಳ್ಳು ಕೇಸ್ ದಾಖಲಿಸಿ  ಬಂಧಿಸಿದ್ದಕ್ಕೆ ಅವರಿಗೆ   50 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ಕೇರಳ  ಸಂಪುಟ ಸಭೆಯಲ್ಲಿ ಇಂದು ನಿರ್ಧಾರ ಕೈಗೊಳ್ಳಲಾಗಿದೆ.

ನಂಬಿ ನಾರಾಯಣ್ ಅವರಿಗೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು  ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪರಿಹಾರ ನೀಡಲಾಗುತ್ತಿದೆ.

ಇಸ್ರೋದ ಸ್ವದೇಶಿ ನಿರ್ಮಿತ ಕ್ರಯೋಜೆನಿಕ್ ಎಂಜಿನ್ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುತ್ತಿದ್ದಾಗ ಈ ತಂತ್ರಜ್ಞಾನವನ್ನು ನಂಬಿ ನಾರಾಯಣನ್  ಪಾಕಿಸ್ತಾನಕ್ಕೆ  ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಸಂಬಂಧ 1994ರ ನವೆಂಬರ್ 30 ರಂದು ಕೇರಳ ಪೊಲೀಸರು ನಂಬಿ ನಾರಾಯಣನ್ ಅವರನ್ನು ಬಂಧಿಸಿದ್ದರು. ನಂತರ ಸಿಬಿಐ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬೇಹುಗಾರಿಕೆ ನಡೆದಿಲ್ಲ ಎಂದು ಸಿಬಿಐ ಹೇಳಿತ್ತು. ನಂತರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ಅವರ ಬಂಧನ ಅನಗತ್ಯವಾಗಿತ್ತು ಎಂದು ಹೇಳಿಕೆ ನೀಡಿತ್ತು.

ಈ ರೀತಿಯ ಹೇಳಿಕೆ ನೀಡಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ,ನೇತೃತ್ವದ ಪೀಠ ನಂಬಿ ನಾರಾಯಣನ್ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದ ಕೇರಳ ಪೊಲೀಸರ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಡಿಕೆ ಜೈನ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com