ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
ದೇಶ
ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿ: ಚುನಾವಣಾ ಆಯೋಗ
ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ...
ನವದೆಹಲಿ: ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಬೇಕು ಮತ್ತು ಹಂಗಾಮಿ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಬಾರದು ಎಂದು ಕೇಂದ್ರ ಚುನಾವಣಾ ಆಯೋಗ ಗುರುವಾರ ಹೇಳಿದೆ.
ಈ ಸಂಬಂಧ ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಗೆಯಾಗಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಆ ರಾಜ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ಹೊಸ ಯೋಜನೆ ಘೋಷಿಸಬಾರದು ಎಂದು ಸೂಚಿಸಿದೆ.
ತೆಲಂಗಾಣದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿರುವುದರಿಂದ ಚುನಾವಣಾ ಆಯೋಗ ಈ ಸೂಚನೆ ನೀಡಿದೆ.
ಸಾಮಾನ್ಯವಾಗಿ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ ಮತ್ತು ಚುನಾವಣಾ ಪ್ರಕ್ರಿಯೆ ಮುಗಿಯುವರೆಗೆ ಅದು ಜಾರಿಯಲ್ಲಿರುತ್ತದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ