ಕುವೈತ್ ನಲ್ಲಿ ಬಲವಂತವಾಗಿ ಮನೆಕೆಲಸ ಮಾಡುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಸಚಿವೆ ಸುಷ್ಮಾ ಸ್ವರಾಜ್

ಕುವೈತ್ ನಲ್ಲಿ ಸಿಲುಕಿಕೊಂಡಿದ್ದ ಹೈದರಾಬಾದ್ ಮೂಲದ ಮಹಿಳೆಯನ್ನು ರಕ್ಷಿಸುವಲ್ಲಿ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಯಶಸ್ವಿಯಾಗಿದ್ದಾರೆ.
ಕುವೈತ್ ನಲ್ಲಿ ಒತ್ತಾಯಪೂರ್ವಕವಾಗಿ ಮನೆಕೆಲಸ ಮಾಡುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಸಚಿವೆ ಸುಷ್ಮಾ ಸ್ವರಾಜ್
ಕುವೈತ್ ನಲ್ಲಿ ಒತ್ತಾಯಪೂರ್ವಕವಾಗಿ ಮನೆಕೆಲಸ ಮಾಡುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಸಚಿವೆ ಸುಷ್ಮಾ ಸ್ವರಾಜ್
ನವದೆಹಲಿ: ಕುವೈತ್ ನಲ್ಲಿ ಸಿಲುಕಿಕೊಂಡಿದ್ದ ಹೈದರಾಬಾದ್ ಮೂಲದ ಮಹಿಳೆಯನ್ನು ರಕ್ಷಿಸುವಲ್ಲಿ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಯಶಸ್ವಿಯಾಗಿದ್ದಾರೆ. 
ಹೊರದೇಶದಲ್ಲಿ ಸಿಲುಕಿಕೊಂಡಿದ್ದ ಮಹಿಳೆಯ ತಾಯಿ, ತಮ್ಮ ಮಗಳು ಎದುರಿಸುತ್ತಿದ್ದ ಪರಿಸ್ಥಿತಿಯನ್ನು ವಿವರಿಸಿ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪತ್ರ ಬರೆದಿದ್ದರು. 
ಸಮಸ್ಯೆಗೆ ಸಿಲುಕಿಕೊಂಡಿದ್ದ ಮಹಿಳೆ ತಮಗೆ ಎದುರಾಗಿದ್ದ ಪರಿಸ್ಥಿತಿಯ ಬಗ್ಗೆ ಎನ್ಎನ್ಐ ಜೊತೆ ಮಾತನಾಡಿದ್ದು, "ಏಜೆಂಟ್ ಒಬ್ಬರು ನನಗೆ  ಲಾಭದಾಯಕ ಬ್ಯುಟೀಷಿಯನ್ ಉದ್ಯೋಗ ಕೊಡಿಸುವುದಾಗಿ ಹೇಳಿ ಕುವೈತ್ ಗೆ ಕರೆದೊಯ್ದರು, ಆದರೆ ಅಲ್ಲಿ ಮನೆಕೆಲಸ ಮಾಡುವುದಕ್ಕೆ ಸೂಚಿಸಿದರು. ಉದ್ಯೋಗ ನೀಡಿದವರು ದಿನನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಹೇಳಿದ್ದಾರೆ. 
ಕಿರುಕುಳ ತಡೆಯಲಾರದೆ ಆ ಮಹಿಳೆ ತನ್ನ ತಾಯಿಗೆ ಕರೆ ಮಾಡಿದೆ. ವಿಷಯ ತಿಳಿದ ಮಹಿಳೆಯ ತಾಯಿ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಗೆ ಪತ್ರ ಬರೆದು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ವಿದೇಶಾಂಗ ಇಲಾಖೆ ಅಧಿಕಾರಿಗಳು ಮಹಿಳೆಯನ್ನು ಭಾರತಕ್ಕೆ ವಾಪಸ್ ಕರೆತರುವುದರಲ್ಲಿ ಯಶಸ್ವಿಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com