ತ್ರಿವಳಿ ತಲಾಖ್ ಸುಗ್ರೀವಾಜ್ಞೆ ಪ್ರಜಾಪ್ರಭುತ್ವದ ಕಗ್ಗೊಲೆ, ಹಿಂಪಡೆಯಬೇಕು: ಎಐಎಂಪಿಎಲ್ ಬಿ

ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಅಪರಾಧೀಕರಣಗೊಳಿಸಲು ಹೊರಡಿಸಿರುವ ಸುಗ್ರೀವಾಜ್ಞೆಯಿಂದ ಪ್ರಜಾಪ್ರಭುತ್ವದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಅಪರಾಧೀಕರಣಗೊಳಿಸಲು ಹೊರಡಿಸಿರುವ ಸುಗ್ರೀವಾಜ್ಞೆಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು, ಅದನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ ಬಿ) ಗುರುವಾರ ಒತ್ತಾಯಿಸಿದೆ.
ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧ ಕುರಿತು ಸಂಸತ್ತಿನಲ್ಲಿ ಚರ್ಚಿಸದಿರುವುದು ದೇಶದ ಕಾನೂನು ರೂಪಿಸುವ ಶಾಸನ ಸಂಸ್ಥೆಗೆ ಅವಮಾನ ಎಂದು ಹೇಳಿದೆ.
ಈ ಸುಗ್ರೀವಾಜ್ಞೆಯೂ 'ಚೋರ್ ದರ್ವಾಜಾ' ಆಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಸಂಸತ್ತಿಗೆ ಮಾಡಿದ ಅವಮಾನ. ಸಂಸತ್ ಅಧಿವೇಶನ ಆರಂಭವಾಗಲಿದೆ.  ಆದರೆ ಸರ್ಕಾರಕ್ಕೆ ಈ ಕುರಿತು ಚರ್ಚಿಸುವ ಚಿಂತೆ ಇಲ್ಲ. ಇದರಿಂದ ಮುಸ್ಲಿಂ ಮಹಿಳೆಯರಿಗೆ ಹಾನಿ ಉಂಟಾಗುತ್ತದೆ ಎಂದು ಎಐಎಂಪಿಎಲ್ ಬಿ ಸಹಾಯಕ ಪ್ರಧಾನ ಕಾರ್ಯದರ್ಶಿ ಮೌಲಾನಾ ಖಾಲಿದ್ ಸೈಫ್ ಉಲ್ಲಾಹ್ ರೆಹ್ಮಾನಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ಸುಗ್ರೀವಾಜ್ಞೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋಗುತ್ತೀರಾ? ಎಂಬ ಪ್ರಶ್ನೆಗೆ, ನಮ್ಮ ಕಾನೂನು ಸಮಿತಿ ಈ ಕುರಿತು ಚರ್ಚಿಸಲಿದೆ ಮತ್ತು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಸಂಪುಟ ಕಳೆದ ಬುಧವಾರ ತ್ರಿವಳಿ ತಲಾಖ್ ನಿಷೇಧಿಸುವ ಹಾಗೂ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು  ಅನುಮೋದನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com