ವ್ಯಾಪಂ ಹಗರಣ: ಕಾಂಗ್ರೆಸ್‌ಗೆ ಸಂಕಷ್ಟ, ದಿಗ್ವಿಜಯ್, ಕಮಲನಾಥ್ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ!

ಮಧ್ಯಪ್ರದೇಶದಲ್ಲಿ ನಡೆದಿದ್ದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್, ಕಮಲನಾಥ್, ಜ್ಯೋತಿರಾಧಿತ್ಯ ಮತ್ತು ಆರ್ಟಿಐ...
ದಿಗ್ವಿಜಯ್ ಸಿಂಗ್-ಕಮಲ್ನಾಥ್
ದಿಗ್ವಿಜಯ್ ಸಿಂಗ್-ಕಮಲ್ನಾಥ್
ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದಿದ್ದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್, ಕಮಲನಾಥ್, ಜ್ಯೋತಿರಾಧಿತ್ಯ ಮತ್ತು ಆರ್ಟಿಐ ಕಾರ್ಯಕರ್ತನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ. 
ಸಾಕ್ಷಿಗಳನ್ನು ತಯಾರಿಸಿದ ಆರೋಪ ಮೇಲೆ ಈ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಸುರೇಶ್ ಸಿಂಗ್ ಮಧ್ಯಪ್ರದೇಶ ಪೊಲೀಸರಿಗೆ ಆದೇಶಿಸಿದ್ದಾರೆ. 
ಮಧ್ಯಪ್ರದೇಶದ ವಕೀಲರಾದ ಸಂತೋಷ್ ಶರ್ಮಾ ಎಂಬುವರು ಬುಧವಾರ ಖಾಸಗಿ ದೂರು ದಾಖಲಿಸಿದ್ದು ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶವನ್ನು ನೀಡಿದೆ. 
‘ವ್ಯಾಪಂ’( Vyapam-Madhya Pradesh Vyavasayik Pariksha Mandal) ಹಗರಣ ಎಂದೇ ಕುಖ್ಯಾತಿ ಪಡೆದಿದೆ. ವೈದ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಪರವಾಗಿ ಇನ್ನೊಬ್ಬರು ಭಾಗಿಯಾಗಿರುವುದನ್ನು ಗಮನಿಸಿದ ವೈದ್ಯರಾದ ಡಾ. ಆನಂದ್ ರಾಯ್ ಅವರು 2013ರಲ್ಲಿ ಈ ಹಗರಣವನ್ನು ಬಯಲು ಮಾಡಿದ್ದರು.
ವ್ಯಾಪಂ ಹಗರಣ?
ಮಧ್ಯಪ್ರದೇಶದ ವೃತ್ತಿಪರ ಶಿಕ್ಷಣ ಅಥವಾ ವ್ಯವಸಾಯಿಕ್ ಪರೀಕ್ಷಾ ಮಂಡಲ್(ವ್ಯಾಪಂ) ಮಧ್ಯಪ್ರದೇಶದ ಸ್ವಾಯತ್ತ ಸಂಸ್ಥೆಯಾಗಿದೆ. 1970ರಲ್ಲಿ ಪ್ರಾರಂಭಗೊಂಡ ಈ ಸಂಸ್ಥೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆಗಳನ್ನು ಆಯೋಜಿಸುತ್ತದೆ. ವೃತ್ತಿ ಶಿಕ್ಷಣ ಪ್ರವೇಶ, ವೈದ್ಯರು, ಕಾನ್‌ಸ್ಟೆಬಲ್, ಶಿಕ್ಷಕರು ಮತ್ತಿತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗಳನ್ನು ಈ ಮಂಡಳಿ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com