ಮೋದಿ ಪರ ನಿಂತ ಶರದ್ ಪವಾರ್, ಎನ್‍ಸಿಪಿ ತೊರೆದ ತಾರಿಖ್ ಅನ್ವರ್ ಗೆ ಕಾಂಗ್ರೆಸ್ ಸ್ವಾಗತ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ರಾಫೆಲ್ ಹಗರಣದಿಂದ ಪ್ರಧಾನಿ...
ತಾರಿಖ್ ಅನ್ವರ್
ತಾರಿಖ್ ಅನ್ವರ್
ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ರಾಫೆಲ್ ಹಗರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ ಹಿನ್ನೆಲೆಯಲ್ಲಿ ಪಕ್ಷ ತೊರೆದ ಎನ್ ಸಿಪಿ ಸಂಸ್ಥಾಪಕ ಸದಸ್ಯ ತಾರಿಖ್ ಅನ್ವರ್ ಅವರನ್ನು ಕಾಂಗ್ರೆಸ್ ಸ್ವಾಗತಿಸಿದೆ.
ಅನ್ವರ್ ಅವರ ನಿರ್ಧಾರವನ್ನು ಶ್ಲಾಘಿಸಿದ ಹಿರಿಯ ಕಾಂಗ್ರೆಸ್ ನಾಯಕ ಪ್ರೇಮ್ ಚಂದ್ ಮಿಶ್ರಾ ಅವರು, ತಾರಿಖ್ ಅನ್ವರ್ ಅವರ ಮುಂದಿನ ರಾಜಕೀಯ ನಡೆಯನ್ನು ಕಾಂಗ್ರೆಸ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಅವರು ಮರಳಿ ಪಕ್ಷಕ್ಕೆ ಬರುವುದಾದರೆ ನಮ್ಮ ಪಕ್ಷ ಅವರನ್ನು ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.
ಶರದ್ ಪವಾರ್ ಅವರು ಪ್ರತಿಪಕ್ಷಗಳ ಮೇಲೆ ದೇಶದ ಜನ ಇಟ್ಟಿದ್ದ ನಂಬಿಕೆಯನ್ನು ಛಿತ್ರಗೊಳಿಸಿದ್ದಾರೆ ಎಂದು ಬಿಹಾರ ಎನ್ ಸಿಪಿ ನಾಯಕ ಹೇಳಿದ್ದಾರೆ.
ರಾಫೆಲ್ ಅಸ್ತ್ರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮೋದಿ ಸರ್ಕಾರವನ್ನು ಜರಿಯುತ್ತಿದ್ದರೆ ಇತ್ತ ಶರದ್ ಪವಾರ್ ಮಾತ್ರ ಮೋದಿ ಸರ್ಕಾರವನ್ನು ಹೊಗಳಿದ್ದರು. ಇದರಿಂದ ಬೇಸರಗೊಂಡಿರುವ ಎನ್‍ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ. 
ಶರತ್ ಪವಾರ್ ಅವರು "ಪ್ರಧಾನಿ ನರೇಂದ್ರ ಮೋದಿ ಉದ್ದೇಶಗಳ ಬಗ್ಗೆ ಜನರಿಗೆ ಅನುಮಾನಗಳಿಲ್ಲ" ಆದರೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕರಣದಲ್ಲಿ ನಡೆದುಕೊಂಡ ರೀತಿ ಜನರಲ್ಲಿ ಗೊಂದಲ ಉಂಟು ಮಾಡಿತ್ತು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com