800 ವರ್ಷಗಳ ಪದ್ಧತಿಗೆ ತೆರೆ, ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ 'ಸುಪ್ರೀಂ' ಅಸ್ತು

800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ...
ಶಬರಿಮಲೆ ದೇವಸ್ತಾನ
ಶಬರಿಮಲೆ ದೇವಸ್ತಾನ
ನವದೆಹಲಿ: 800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಸುಪ್ರೀಂಕೋರ್ಟ್ ನ ಸಿಜೆ ದೀಪಕ್ ಮಿಶ್ರಾ ಸೇರಿದಂತೆ ಪಂಚ ಪೀಠ ನ್ಯಾಯಾಧೀಶರು ಪ್ರತ್ಯೇಕ ತೀರ್ಪನ್ನು ನೀಡಿದ್ದಾರೆ. ದೀಪಕ್ ಮಿಶ್ರಾ ಅವರು ತಮ್ಮ ತೀರ್ಪಿನಲ್ಲಿ ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯರನ್ನು ದುರ್ಬರಂತೆ ನೋಡಬಾರದು. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು ಎಂದು ಹೇಳಿದ್ದು ಕೊನೆಗೆ ದೇವಸ್ತಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದಾರೆ. 
ಮುಟ್ಟಾದ ಮಹಿಳೆಯರಿಗೆ ದೇವಸ್ತಾನದ ಪ್ರವೇಶದ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಕಳೆದ ವರ್ಷದ ಅಕ್ಟೋಬರ್ 13ರಂದು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು. 
ದೇವಸ್ತಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ತಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com