ಎನ್ ಕೌಂಟರ್ ಅಲ್ಲ, ಘಟನೆ ಸಂಬಂಧ ಸಿಬಿಐ ತನಿಖೆಗೆ ಆದೇಶಿಸಲಾಗುತ್ತದೆ: ಸಿಎಂ ಯೋಗಿ ಆದಿತ್ಯಾನಾಥ್

ಆ್ಯಪಲ್ ಉದ್ಯೋಗಿಯ ಮೇಲಿನ ಪೊಲೀಸರ ಗುಂಡಿನ ದಾಳಿ ಎನ್ ಕೌಂಟರ್ ಅಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಲಖನೌ: ಆ್ಯಪಲ್ ಉದ್ಯೋಗಿಯ ಮೇಲಿನ ಪೊಲೀಸರ ಗುಂಡಿನ ದಾಳಿ ಎನ್ ಕೌಂಟರ್ ಅಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.
ಸೂಚನೆ ನೀಡಿದರೂ ಕಾರು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೇ ಪೊಲೀಸ್ ಪೇದೆಯೋರ್ವ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಪರಿಣಾಮ ಆ್ಯಪಲ್ ಸಂಸ್ಥೆಯ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಈ  ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಯೋಗಿ ಆದಿತ್ಯಾನಾಥ್ ಅವರು, ಘಟನೆಗೆ ಸಂಬಂಧಿಸಿದಂತೆ ತಾವು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಇದು ಆಕಸ್ಮಿಕ ಘಟನೆಯೇ ಹೊರತು ಎನ್ ಕೌಂಟರ್ ಅಲ್ಲ. ಘಟನೆಗೆ ಸಂಬಂಧಿಸಿದಂತೆ ತಾವು ಸಿಬಿಐ ತನಿಖೆ ನಡೆಸಲು ನಿರ್ಧರಿಸಿದ್ದೇವೆ.
ಆರೋಪಿ ಪೇದೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಪೂರ್ಣ ಮಾಹಿತಿ ಸಿಕ್ಕ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.
ಇನ್ನು ನಿನ್ನೆ ತಡರಾತ್ರಿ ಲಖನೌನಲ್ಲಿ ಕಾರಿನಲ್ಲಿ ತೆರಳುತ್ತಿ ಆ್ಯಪಲ್ ಉದ್ಯೋಗಿ ವಿವೇಕ್ ತಿವಾರಿ ಪೊಲೀಸ್ ಪೇದೆಗಳಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬಳಿಕ ಪೊಲೀಸರು ಕಾರು ನಿಲ್ಲಿಸು ಎಂದು ಸೂಚನೆ ಕೊಟ್ಟರೂ ನಿಲ್ಲಿಸದೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದರು. ಇದರಿಂದ ಶಂಕೆಗೊಂಡು ಪೊಲೀಸ್ ಪೇದೆ ಅವರ ಕಾರಿನ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ವಿವೇಕ್ ತಿವಾರಿ ಕುತ್ತಿಗೆ ಬಳಿ ಗುಂಡು ತಗುಲಿದೆ. ಗುಂಡೇಟು ತಗುಲುತ್ತಿದ್ದಂತೆಯೇ ತಿವಾರಿ ಗಾಡಿ ಅಂಡರ್ ಪಾಸ್ ಗೋಡೆಗೆ ಢಿಕ್ಕಿ ಹೊಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದರು. 
ಈ ವಿಚಾರ ಇದೀಗ ಉತ್ತರ ಪ್ರದೇಶದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com