ಬಿಜೆಪಿ ಹಿಂದೂಗಳನ್ನೂ ರಕ್ಷಿಸುವುದಿಲ್ಲ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಲಖನೌ ನಲ್ಲಿ ನಡೆದ ಆಪಲ್ ಸಂಸ್ಥೆಯ ನೌಕರನ ಹತ್ಯೆ ಪ್ರಕರಣದ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಹಿಂದೂಗಳನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಹಿಂದೂಗಳನ್ನೂ ರಕ್ಷಿಸುವುದಿಲ್ಲ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಬಿಜೆಪಿ ಹಿಂದೂಗಳನ್ನೂ ರಕ್ಷಿಸುವುದಿಲ್ಲ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
Updated on: 
ನವದೆಹಲಿ: ಲಖನೌ ನಲ್ಲಿ ನಡೆದ ಆಪಲ್ ಸಂಸ್ಥೆಯ ನೌಕರನ ಹತ್ಯೆ ಪ್ರಕರಣದ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಹಿಂದೂಗಳನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ. 
ಕಾರು ನಿಲ್ಲಿಸಲಿಲ್ಲವೆಂಬ ಕಾರಣಕ್ಕೆ ಪೇದೆಯ ಗುಂಡೇಟಿಗೆ ಬಲಿಯಾದ ವಿವೇಕ್ ತಿವಾರಿ ತಿವಾರಿ ಬಗ್ಗೆ ಟ್ವಿಟರ್ ನಲ್ಲಿ ಬರೆದಿರುವ ಅರವಿಂದ್ ಕೇಜ್ರಿವಾಲ್, ಬಿಜೆಪಿ ಹಿಂದೂಗಳ ಹಿತಾಸಕ್ತಿಗಳನ್ನೂ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. 
"ಅಧಿಕಾರಕ್ಕಾಗಿ ಬಿಜೆಪಿ ನಾಯಕರು ಏನನ್ನು ಬೇಕಾದರೂ ಮಾಡುತ್ತಾರೆ. ವಿವೇಕ್ ತಿವಾರಿ ಹಿಂದೂ ಆಗಿದ್ದರೂ ಆತನನ್ನು ಹತ್ಯೆ ಮಾಡಲಾಯಿತು. ಹಿಂದೂಗಳನ್ನು ರಕ್ಷಿಸುತ್ತೇವೆ ಎಂದು ಹೇಳುವ ಬಿಜೆಪಿ, ವಿವೇಕ್ ತಿವಾರಿಯನ್ನೇಕೆ ಹತ್ಯೆ ಮಾಡಿದೆ.? ಬಿಜೆಪಿ ಹಿಂದೂಗಳ ಹಿತಬಯಸುವ ಪಕ್ಷವಲ್ಲ. ಅಧಿಕಾರ ಹಿಡಿಯಲು ಹಿಂದೂಗಳನ್ನು ಹತ್ಯೆ ಮಾಡಲು ಸಹ ಬಿಜೆಪಿ ಹಿಂಜರಿಯುವುದಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. 
ಕೇಜ್ರಿವಾಲ್ ಹೇಳಿಕೆಗೆ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಿಮ್ಮ ನಾಯಕನ  ಸಂಕುಚಿತ ಮನಸ್ಸು ಹೇಗಿದೆ ಎಂಬುದನ್ನು ನೋಡಿ" ಎಂದು ದೆಹಲಿ ಆಪ್ ಕಾರ್ಯಕರ್ತರಿಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಟ್ವಿಟರ್ ನಲ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com