ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಶಬರಿಮಲೆ ದೇವಾಲಯ ಪ್ರವೇಶಿಸುವ ಮಹಿಳೆಯರ ಬಗ್ಗೆ ಟಿಡಿಪಿ ಮುಖ್ಯಸ್ಥರು ಹೀಗಂದ್ರು!

ಎಲ್ಲಾ ವಯಸ್ಸಿನ ಮಹಿಳೆಯರೂ ಶಬರಿಮಲೆ ದೇವಾಲಯಕ್ಕೆ ಹೋಗಬಹುದೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ ದೇವಾಲಯಕ್ಕೆ ತೆರಳುವ ಮಹಿಳೆಯರ ಬಗ್ಗೆ ಕುತೂಹಲ ಮೂಡಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಶಬರಿಮಲೆ ದೇವಾಲಯ ಪ್ರವೇಶಿಸುವ ಮಹಿಳೆಯರ ಬಗ್ಗೆ ಟಿಡಿಪಿ ಮುಖ್ಯಸ್ಥರು ಹೀಗಂದ್ರು!
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಶಬರಿಮಲೆ ದೇವಾಲಯ ಪ್ರವೇಶಿಸುವ ಮಹಿಳೆಯರ ಬಗ್ಗೆ ಟಿಡಿಪಿ ಮುಖ್ಯಸ್ಥರು ಹೀಗಂದ್ರು!
ತಿರುವನಂತಪುರಂ: ಎಲ್ಲಾ ವಯಸ್ಸಿನ ಮಹಿಳೆಯರೂ ಶಬರಿಮಲೆ ದೇವಾಲಯಕ್ಕೆ ಹೋಗಬಹುದೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ ದೇವಾಲಯಕ್ಕೆ ತೆರಳುವ ಮಹಿಳೆಯರ ಬಗ್ಗೆ ಕುತೂಹಲ ಮೂಡಿದೆ. 
ವಯಸ್ಸಿನ ಮಿತಿ ಇಲ್ಲದೇ ಮಹಿಳೆಯರು ದೇವಾಲಯಕ್ಕೆ ತೆರಳುವುದರ ಬಗ್ಗೆ ತಿರುವಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎ ಪದ್ಮಕುಮಾರ್ "ಅಯ್ಯಪ್ಪ ಸ್ವಾಮಿಯ ನಿಜವಾದ ಮಹಿಳಾ ಭಕ್ತರು" ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವಯಸ್ಸಿನ ಮಿತಿ ಇಲ್ಲದೇ ದೇವಾಲಯ ಪ್ರವೇಶಿಸುವ ಸಾಧ್ಯತೆ ಕಡಿಮೆ. ಮಹಿಳಾ ಹಕ್ಕುಗಳ ಕಾರ್ಯಕರ್ತರು ಮಾತ್ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೇವಾಲಯ ಪ್ರವೇಶಿಸುತ್ತಾರೆ ಎಂದು ಹೇಳಿದ್ದಾರೆ. 
10-50 ವಯಸ್ಸಿನ ಮಹಿಳೆಯರು ಶಬರಿಮಲೆ ದೇವಾಲಯ ಪ್ರವೇಶಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು (800 ವರ್ಷಗಳ ಹಿಂದಿನ ಪದ್ಧತಿ)ಯನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿ, ಮಹಿಳೆ ಮತ್ತು ಪುರುಷರ ನಡುವೆ ತಾರತಮ್ಯ ಮಾಡುವಂತಿಲ್ಲ ಎಂದು ಹೇಳಿತ್ತು.
ಈ ನಡುವೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿರುವ ಎ.ಪದ್ಮಕುಮಾರ್, ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೊಳಿಸುವುದಕ್ಕಾಗಿ ಯಾತ್ರಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕಿದ್ದು. ಟಿಡಿಬಿ ಸರ್ಕಾರದಿಂದ 100 ಎಕರೆಯಷ್ಟು ಅರಣ್ಯ ಭೂಮಿಯನ್ನು ನೀಡುವಂತೆ ಮನವಿ ಮಾಡಲಿದೆ, ಈ ನಡುವೆ ಸುಪ್ರೀಂ ಕೋರ್ಟ್ ತೀರ್ಪಿನ ಮರುಪರಿಶೀಲನೆಗೂ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com