ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ದಾಳಿ; ಪೊಲೀಸ್ ಅಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಉಗ್ರಗಾಮಿಗಳು ಭಾನುವಾರ ಬೆಳಗ್ಗೆ ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಉಗ್ರಗಾಮಿಗಳು ಭಾನುವಾರ ಬೆಳಗ್ಗೆ ನಡೆಸಿದ ದಾಳಿಯಲ್ಲಿ  ತೀವ್ರ ಗಾಯಗೊಂಡ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ಇಂದು ಮುಂಜಾನೆ ದಕ್ಷಿಣ ಕಾಶ್ಮೀರದಲ್ಲಿ ಪೊಲೀಸ್ ಠಾಣೆ ಮೇಲೆ ಉಗ್ರಗಾಮಿಗಳು ಅವ್ಯಾಹತವಾಗಿ ಗುಂಡಿನ ಸುರಿಮಳೆಗೈದರಲ್ಲದೆ ಗ್ರೆನೇಡ್ ನ್ನು ಕೂಡ ಎಸೆದರು ಎಂದು ಠಾಣೆಯ ಅಧಿಕಾರಿಗಳು ಘಟನೆ ಬಗ್ಗೆ ವಿವರಿಸಿದ್ದಾರೆ.

ದಾಳಿಯಲ್ಲಿ ತೀವ್ರ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿಯನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಹುತಾತ್ಮರಾಗಿದ್ದಾರೆ.  ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com