ಕಾಶ್ಮೀರ: ಪೂಂಚ್ ನಲ್ಲಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ಒಬ್ಬರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಗುರುವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಗುರುವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದಾರೆ.
ಇಂದು ಸಂಜೆ 6 ಗಂಟೆಯ ಸುಮಾರಿಗೆ ದೆಗ್ವಾರ್ ಮತ್ತು ಗುಲ್ಪುರ್ ಸೆಕ್ಟರ್ ನಲ್ಲಿ ಪಾಕ್ ಸೇನೆ ಮೋರ್ಟಾರ್ಗಳೊಂದಿಗೆ ಶೆಲ್‌ ದಾಳಿ ನಡೆಸಿದೆ ಎಂದು ರಕ್ಷಣಾ ಇಲಾಖೆ ಪಿಆರ್ ಒ ತಿಳಿಸಿದ್ದಾರೆ.
ಭಾರತೀಯ ಪಡೆ ಸಹ ಪ್ರಬಲ ಪ್ರತಿದಾಳಿ ನಡೆಸಿದ್ದು, ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ. 
ಕಳೆದ ಮಂಗಳವಾರ ಭಾರತೀಯ ಸೇನೆ, ಕದನ ವಿರಾಮ ಉಲ್ಲಂಘಿಸಿದ್ದ ಪಾಕ್ ಸೇನೆಯ ಏಳು ಪೋಸ್ಟ್ ಗಳ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಪ್ರತ್ತುತ್ತರ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com