ಕಾಶ್ಮೀರ: ರಜೆಯಲ್ಲಿ ಮನೆಗೆ ಆಗಮಿಸಿದ್ದ ಯೋಧನನ್ನು ಗುಂಡಿಕ್ಕಿ ಕೊಂದ ಉಗ್ರರು

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ರಜೆಯಲ್ಲಿ ಮನೆಗೆ ತೆರಳಿದ್ದ ಭಾರತೀಯ ಸೇನೆಯ ಯೋಧನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಯೋಧನನ್ನು ಭಾರತೀಯ ಸೇನೆಯ ಲೈಟ್ ಇನ್ ಫೆಂಟ್ರಿ ಯೋಧ ಮೊಹಮ್ಮದ್ ರಫೀಕ್ ಯಾತೂ ಎಂದು ಗುರುತಿಸಲಾಗಿದೆ. ಮೊಹಮ್ಮದ್ ರಫೀಕ್ ಯಾತೂ ಕಾಶ್ಮೀರದ ವಾರ್ಪೋರಾದ ನಿವಾಸಿಯಾಗಿದ್ದು, ಇತ್ತೀಚೆಗಷ್ಟೇ ರಜೆ ನಿಮಿತ್ತ ಮನೆಗೆ ಆಗಮಿಸಿದ್ದ.
ಆದರೆ ಇಂದು ಮೊಹಮ್ಮದ್ ರಫೀಕ್ ಯಾತೂ ಮೇಲೆ ಉಗ್ರರು ತೀವ್ರ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗುಂಡಿನ ದಾಳಿಯಿಂದಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ವಾರ್ಪೋರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆMohammod Rafi Yatooಮೊಹಮದ್ ರಫೀ ಯಾತೂ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


