ಹಿಂದೂ ವಿರೋಧಿ ಹೇಳಿಕೆ: ಊರ್ಮಿಳಾ ಮತೋಂಡ್ಕರ್ ವಿರುದ್ಧ ಕೇಸ್!
ದೇಶ
ಹಿಂದೂ ವಿರೋಧಿ ಹೇಳಿಕೆ: ಊರ್ಮಿಳಾ ಮತೋಂಡ್ಕರ್ ವಿರುದ್ಧ ಕೇಸ್!
ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತನೋರ್ವ ದೂರು ದಾಖಲಿಸಿದ್ದಾರೆ.
ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತನೋರ್ವ ದೂರು ದಾಖಲಿಸಿದ್ದಾರೆ.
ಹಿಂದೂ ವಿರೋಧಿ ಹೇಳಿಕೆ ನೀಡಿರುವ ಉರ್ಮಿಳಾ ಮತೋಂಡ್ಕರ್ ಹಾಗೂ ಮತೋಂಡ್ಕರ್ ಗೆ ಈ ರೀತಿ ಮಾಡಲು ಸೂಚನೆ ನೀಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕ್ರಮ ಜರುಗಿಸಬೇಕೆಂದು ಬಿಜೆಪಿ ಕಾರ್ಯಕರ್ತ ಸುರೇಶ್ ನಖುವಾ ಆಗ್ರಹಿಸಿದ್ದಾರೆ.
ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಅವರ ವಾಹಿನಿಯ ಕಾರ್ಯಕ್ರಮದಲ್ಲಿ ನಟಿ ಉರ್ಮಿಳಾ ಮತೋಂಡ್ಕರ್ ಹಿಂದೂ ಧರ್ಮ ಇಡೀ ಜಗತ್ತಿನಲ್ಲೇ ಅತ್ಯಂತ ಹಿಂಸಾತ್ಮಕ ಧರ್ಮ ಎಂದು ಜರಿದಿದ್ದರು. ವಾಹಿನಿಯಲ್ಲಿ ಈ ರೀತಿಯ ಹೇಳಿಕೆ ನೀಡುವುದಕ್ಕೆ ಅವಕಾಶ ನೀಡಿದ್ದಾರೆ ಎಂದು ಆರೋಪಿಸಿ ರಾಜ್ ದೀಪ್ ಸರ್ದೇಸಾಯಿ ವಿರುದ್ಧವೂ ಸುರೇಶ್ ನಖುವಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ.
ಉರ್ಮಿಳಾ ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರಿಂದ ಅಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪೋವೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮತೋಂಡ್ಕರ್ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ