ದೇಶ

ಚುನಾವಣೆ ಹೊಸ್ತಿಲಲ್ಲಿ ಮಹಾರಾಷ್ಟ್ರ ಬಿಜೆಪಿಗೆ ಮರ್ಮಾಘಾತ!

ಚುನಾವಣೆ ಹೊಸ್ತಿಲಲ್ಲಿ ಮಹಾರಾಷ್ಟ್ರ ಬಿಜೆಪಿಗೆ ಮರ್ಮಾಘಾತ!
ಚುನಾವಣೆ ಹೊಸ್ತಿಲಲ್ಲಿ ಮಹಾರಾಷ್ಟ್ರ ಬಿಜೆಪಿಗೆ ಮರ್ಮಾಘಾತ!
Published On :
ಧುಲೆ: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಮಹಾರಾಷ್ಟ್ರ ಬಿಜೆಪಿ ಅಘಾತಕಾರಿ ಬೆಳವಣಿಗೆಯನ್ನು ಎದುರಿಸಿದೆ. 
ರಾಜ್ಯದ ಧುಲೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಗೋಟೆ ಪಕ್ಷ ತೊರೆದಿದ್ದಾರೆ.  ಮಾಜಿ ಪತ್ರಕರ್ತರೂ ಆಗಿರುವ ಅನಿಲ್ ಗೋಟೆ ಧುಲೆ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಅನಿಲ್ ಗೋಟೆ ಬಿಜೆಪಿ ಅಭ್ಯರ್ಥಿ ಸುಭಾಶ್ ಭಾಮ್ರೆ ಅವರನ್ನು ಎದುರಿಸಲಿದ್ದಾರೆ. 
ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರಿಗೆ ಸಲ್ಲಿಸಿದ್ದೇನೆ, ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ಪಕ್ಷದ ಅಧ್ಯಕ್ಷ ರಾವ್ ಸಾಹೇಬ್ ದನ್ವೆ ಪಾಟೀಲ್ ಅವರಿಗೆ ಸಲ್ಲಿಸಿದ್ದೇನೆ, ಧುಲೆ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಗೋಟೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. 
ಪಕ್ಷದ ಆಂತರಿಕ ವಿಷಯಗಳು ಹಾಗೂ ರಾಜಕೀಯ ಬೆಳವಣಿಗೆಗಳಿಂದ ಅಸಮಾಧನಗೊಂಡಿದ್ದ ಅನಿಲ್ ಗೋಟೆ, ಕಳೆದ 6 ತಿಂಗಳಿಂದ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.