ಕಾಶ್ಮೀರ: ರಾಜಕೀಯ ನಾಯಕರಿಗೆ, ಕಾರ್ಯಕರ್ತರಿಗೆ ಮತ್ತೆ ಭದ್ರತೆ ಒದಗಿಸಿದ ಸರ್ಕಾರ

ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮ ಉಗ್ರ ದಾಳಿಯ ನಂತರ ಹಿಂಪಡೆಯಲಾಗಿದ್ದ40 ರಾಜಕಾರಣಿಗಳ ಹಾಗೂ ರಾಜಕೀಯ ಕಾರ್ಯಕರ್ತರಿಗೆ...
ಸತ್ಯಪಾಲ್ ಮಲಿಕ್
ಸತ್ಯಪಾಲ್ ಮಲಿಕ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮ ಉಗ್ರ ದಾಳಿಯ ನಂತರ ಹಿಂಪಡೆಯಲಾಗಿದ್ದ40 ರಾಜಕಾರಣಿಗಳ ಹಾಗೂ ರಾಜಕೀಯ ಕಾರ್ಯಕರ್ತರಿಗೆ ಜಮ್ಮು-ಕಾಶ್ಮೀರ ಸರ್ಕಾರ ಮತ್ತೆ ಭದ್ರತೆಯನ್ನು ಒದಗಿಸಿದೆ. 
ರಾಜ್ಯ ಸರ್ಕಾರದ ಉನ್ನತ ಮೂಲಗಳ ಪ್ರಕಾರ, ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ರಾಜಕೀಯ ನಾಯಕರಿಗೆ ಮರಳಿ ಭದ್ರತೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಪ್ರತ್ಯೇಕವಾದಿಗಳಿಗೆ ಮತ್ತೆ ಭದ್ರತೆ ನೀಡಲು ನಿರಾಕರಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೆ ಪ್ರಮುಖ ರಾಜಕಾರಣಿಗಳಿಗೆ ಅಪಾಯ ಇದೆ ಎಂದು ಆರೋಪಿಸಿ ವಿವಿಧ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಭದ್ರತೆಯನ್ನು ಮತ್ತೆ ಒದಗಿಸುವ ನಿರ್ಧಾರಕ್ಕೆ ಬರಲಾಗಿದೆ.
ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದ ಕಣಿವೆ ರಾಜ್ಯದ ರಾಜಕೀಯ ಪಕ್ಷಗಳ ಭಯೋತ್ಪದಾಕ ಚಟುವಟಿಕೆ ಇರುವ ಕಾಶ್ಮೀರದಲ್ಲಿ ನಾಯಕರ ಭದ್ರತೆಯನ್ನು ವಾಪಸ್ ತೆಗೆದುಕೊಂಡಿರುವ ಕ್ರಮವು ಚುನಾವಣಾ ಪ್ರಕ್ರಿಯೆಗೆ ತೊಂದರೆ ಉಂಟುಮಾಡುವ, ನಾಯಕರನ್ನು ಅಪಾಯಕ್ಕೆ ಸಿಲುಕಿಸುವ ಷಡ್ಯಂತ್ರವಿದೆ ಎಂದು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com