ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ: ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದ ಚಾರ್ಜ್ ಶೀಟ್

ಕ್ರೈಸ್ತ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಿಗಿದ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರ ವಿರುದ್ಧ ಪೊಲೀಸರು ದೋಷಾರೋಪಪಟ್ಟಿ...
ಪ್ರತಿಭಟನೆ ನಡೆಸುತ್ತಿರುವುದು(ಸಂಗ್ರಹ ಚಿತ್ರ)
ಪ್ರತಿಭಟನೆ ನಡೆಸುತ್ತಿರುವುದು(ಸಂಗ್ರಹ ಚಿತ್ರ)
ಕೊಚ್ಚಿ: ಕ್ರೈಸ್ತ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಿಗಿದ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರ ವಿರುದ್ಧ ಪೊಲೀಸರು ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣ ನಡೆದು ಒಂದು ವರ್ಷದ ನಂತರ ಪೊಲೀಸರು ಇಂದು ಜ್ಯುಡಿಷಿಯಲ್ ಫಸ್ಟ್ ಕ್ಲಾಸ್ ಮ್ಯಾಜಿಸ್ಟ್ರೇಟ್ ಅವರ ಮುಂದೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.
ಕಳೆದ ವರ್ಷದ ಜೂನ್ ನಲ್ಲಿ  ಹಿರಿಯ ಕ್ರೈಸ್ತ ಸನ್ಯಾಸಿನಿಯ ಮೇಲೆ ಜಲಂಧರ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೋ ಮುಲಕ್ಕಲ್ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಕುರುವಿಲನಗಡದಲ್ಲಿರು ಚರ್ಚ್ ನ ಅತಿಥಿ ಗೃಹದಲ್ಲಿ 2014 ರ ಮೇ ತಿಂಗಳಲ್ಲಿ ತಮ್ಮ ಮೇಲೆ ಹಲವು ಬಾರಿ ಲೈಂಗಿಕ ಹಲ್ಲೆ ನಡೆಸಿದ್ದರು ಎಂದು ಸಂತ್ರಸ್ಥ ಕ್ರೈಸ್ತ ಸನ್ಯಾಸಿನಿ ಆರೋಪಿಸಿದ್ದರು.
ಈ ಕುರಿತು ಚರ್ಚ್ ಉನ್ನತ ಅಧಿಕಾರಿಗಳಿಗೆ ಹಲವು ಬಾರಿ ದೂರು ಸಲ್ಲಿಸಿದರೂ, ಅವರು, ಯಾವುದೇ ಕ್ರಮ ಕೈಗೊಳ್ಳದ ಕಾರಣ ಅನ್ಯಮಾರ್ಗವಿಲ್ಲದೆ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದೆ ಎಂದು ಆಕೆ ಹೇಳಿದ್ದರು. ಘಟನೆಯನ್ನು ಖಂಡಿಸಿ ಆರೋಪಿ ಬಿಷಪ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಲವು ಕ್ರೈಸ್ತ ಸನ್ಯಾಸಿನಿಯರು  ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com