ಬಾಬ್ರಿ ಮಸೀದಿ ಇದ್ದ ಜಾಗದಲ್ಲೇ ನಮಗೆ ರಾಮಮಂದಿರ ಬೇಕು: ಕಾಂಗ್ರೆಸ್ ನಾಯಕ ವೀರಭದ್ರ ಸಿಂಗ್

ಅಚ್ಚರಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ರಾಮ ಮಂದಿರ ನಿರ್ಮಾಣ ಬಗ್ಗೆ ಹೇಳಿಕೆ ನೀಡಿದ್ದಾರೆ.
ವೀರಭದ್ರ ಸಿಂಗ್
ವೀರಭದ್ರ ಸಿಂಗ್
Updated on
ಅಚ್ಚರಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ರಾಮ ಮಂದಿರ ನಿರ್ಮಾಣ ಬಗ್ಗೆ ಹೇಳಿಕೆ ನೀಡಿದ್ದಾರೆ. 
ರಾಮ ಮಂದಿರ ನಿರ್ಮಾಣದ ಪರವಾಗಿ ಹೇಳಿಕೆ ನೀಡಿರುವ ವೀರಭದ್ರ ಸಿಂಗ್, ಅಯೋಧ್ಯೆಯ ಯಾವ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಾಣವಾಗಿತ್ತೋ ಅದೇ ಜಾಗದ್ದಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದಿದ್ದಾರೆ. 
ಸಂದರ್ಶನವೊಂದರಲ್ಲಿ ರಾಮ ಮಂದಿರದ ಬಗ್ಗೆ ಮಾತನಾಡಿರುವ ವೀರಭದ್ರ ಸಿಂಗ್, ಭಾರತಕ್ಕೆ ಇಸ್ಲಾಮ್ ಬರುವುದಕ್ಕೂ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ಇತ್ತು. ಮಂದಿರವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿತ್ತು. ಅಯೋಧ್ಯೆ ರಾಮನ ರಾಜಧಾನಿ, ಮಸೀದಿ ಇದ್ದ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ಬಿಜೆಪಿಗೆ ಧೈರ್ಯದ ಕೊರತೆ ಇದೆ ಎಂದು ವೀರಭದ್ರ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಬಿಜೆಪಿಗೆ ಧೈರ್ಯ ಇದ್ದಿದ್ದರೆ ರಾಮ ಮಂದಿರ ನಿರ್ಮಿಸುತ್ತಿದ್ದರು. ರಾಮ ಮಂದಿರ ನಿರ್ಮಾಣಕ್ಕೆ ಹಾದಿ ಮಾಡಿಕೊಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com