ಪ್ರಧಾನಿ ಮೋದಿ ಮುಡಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದ ಅಪೋಸ್ಲ್' ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು...
ನರೇಂದ್ರ ಮೋದಿ -  ವ್ಲಾದಿಮಿರ್ ಪುಟಿನ್ (ಸಂಗ್ರಹ ಚಿತ್ರ)
ನರೇಂದ್ರ ಮೋದಿ - ವ್ಲಾದಿಮಿರ್ ಪುಟಿನ್ (ಸಂಗ್ರಹ ಚಿತ್ರ)
ನವದೆಹಲಿ: ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದ ಅಪೋಸ್ಲ್' ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಜನರಾಗಿದ್ದಾರೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶುಕ್ರವಾರ ಘೋಷಿಸಿದ್ದಾರೆ.
ಭಾರತ ಮತ್ತು ರಷ್ಯಾದ ಸಂಬಂಧ ಸುಧಾರಣೆಗೆ ಶ್ರಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಈ ಪ್ರತಿಷ್ಠಿತ ಗೌರವ ನೀಡಲಾಗಿದೆ ಎಂದು ರಷ್ಯಾ ತಿಳಿಸಿದೆ.
ಪ್ರಧಾನಿ ಮೋದಿ ಅವರು ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆಯುತ್ತಿರುವ ಭಾರತದ ಮೊದಲ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಹಿಂದೆ ಈ ಪ್ರಶಸ್ತಿಯನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್, ಅಜರ್ ಬೈಜಾನ್ ಪ್ರಧಾನಿ ಹೈದರ್ ಅಲಿಯಾವ್, ಕಜಕಿಸ್ತಾನದ ಅಧ್ಯಕ್ಷ ನುರ್ಸುಲ್ಟಾನ್ ನಜರ್ಬಯೆವ್ ಅವರಿಗೆ ಸಿಕ್ಕಿತ್ತು.
ಏಪ್ರಿಲ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ನೀಡುವ ಅತ್ಯುನ್ನತ ನಾಗರಿಕ ಪುರಸ್ಕಾರ `ಝಾಯೆದ್ ಮೆಡಲ್’ ಪುರುಸ್ಕಾರಕ್ಕೆ ಭಾಜನರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com