ಕಾಶ್ಮೀರದಲ್ಲಿ ಬಾಲ ಬಿಚ್ಚಿದ ಇಬ್ಬರು ಉಗ್ರರ ಮಟ್ಟ ಹಾಕಿದ ಸೇನೆ, ತೀವ್ರ ಶೋಧ ಕಾರ್ಯಾಚರಣೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ ಬೆಹ್ರಾ ಪ್ರಾಂತ್ಯದ ಬಗೇಂದರ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದ್ದು, ಮನೆಯೊಂದರಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದಾರೆ.
ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೈನಿಕರು ಕೂಡಲೇ ಘಟನಾ ಸ್ಥಳವನ್ನು ಸುತ್ತುವರಿದ ಸೇನೆ ಉಗ್ರರ ಬಂಧನಕ್ಕೆ ಮುಂದಾಗಿದೆ. ಈ ವೇಳೆ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸೈನಿಕರೂ ಕೂಡ ಈ ವೇಳೆ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಘಟನಾ ಸ್ಥಳದಲ್ಲಿ ಸೈನಿಕರು ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಸುತ್ತಮುತ್ತಲಿನ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com