ದೇಶ

ಭೂಮಿಯಲ್ಲಿರುವ ಯಾವುದೇ ಶಕ್ತಿ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ: ನಿತೀಶ್ ಕುಮಾರ್

ಭೂಮಿಯಲ್ಲಿರುವ ಯಾವುದೇ ಶಕ್ತಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

ಭೂಮಿಯಲ್ಲಿರುವ ಯಾವುದೇ ಶಕ್ತಿ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ: ನಿತೀಶ್ ಕುಮಾರ್
ನಿತೀಶ್ ಕುಮಾರ್
Published On :
ಗೋಪಾಲ್ ಗಂಜ್: ಭೂಮಿಯಲ್ಲಿರುವ ಯಾವುದೇ ಶಕ್ತಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. 
ಮೀಸಲಾತಿ ಕುರಿತು ಹರಡುತ್ತಿರುವ ಗೊಂದಲದ ಬಗ್ಗೆ ಎಚ್ಚರಿಕೆ ಇಂದ ಇರಿ ಎಂದು ಜನತೆಗೆ ನಿತೀಶ್ ಕುಮಾರ್ ಕರೆ ನೀಡಿದ್ದಾರೆ.  ಮಹಾಘಟಬಂಧನದಲ್ಲಿ ಗುರುತಿಸಿಕೊಂಡಿರುವ ನಾಯಕರಾದ  ಆರ್ ಜೆಡಿಯ ತೇಜಸ್ವಿ ಯಾದವ್, ಆರ್ ಎಲ್ಎಸ್ ಪಿ ಮುಖ್ಯಸ್ಥರಾದ ಉಪೇಂದ್ರ ಕುಶ್ವಾಹ, ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮೀಸಲಾತಿ ಮುಂದುವರೆಯುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. 
ಈ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಎನ್ ಡಿಎಯಲ್ಲಿ ಗುರುತಿಸಿಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್,   ಭೂಮಿಯಲ್ಲಿರುವ ಯಾವುದೇ ಶಕ್ತಿ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ, ಅನಗತ್ಯ ಗೊಂದಲಗಳಿಗೆ ಕಿವಿಗೊಡಬೇಡಿ ಎಂದು ಜನತೆಗೆ ಕರೆ ನೀಡಿದ್ದಾರೆ. ಪಂಚಾಯತ್ ಚುನಾವಣೆಗಳಲ್ಲಿ ನಾನು ಮೀಸಲಾತಿಯನ್ನು ಪರಿಚಯಿಸಿದೆ, ನರೇಂದ್ರ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ಸಾಮಾನ್ಯ ವರ್ಗದವರಿಗೆ ಶೇ.10 ರಷ್ಟು ಮೀಸಲಾತಿಯನ್ನು ನೀಡಿದರು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.