ಉತ್ತರ ಪ್ರದೇಶದಲ್ಲಿ ಹಾರ್ದೋಯ್ ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಬೇಡ್ಕರ್ ನ್ನು ವಿರೋಧಿಸಿದವರ ಹೆಸರಿನಲ್ಲಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮತಯಾಚನೆ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರ ಹೆಸರಿನಲ್ಲಿ ಮತ ಕೇಳುತ್ತಿರುವವರು ಅವರ ಜೀವನದಿಂದ ಏನನ್ನೂ ಕಲಿತಿಲ್ಲ. ಅಂಬೇಡ್ಕರ್ ಗೆ ಅವಮಾನ ಮಾಡಿದವರ ಹೆಸರಿನಲಿ ಬೆಹನ್ ಜೀ ಮತಗಳನ್ನು ಕೇಳುತ್ತಿದ್ದಾರೆ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.