ಬಾಬ್ರಿ ಮಸೀದಿ ಧ್ವಂಸಕ್ಕೆ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ: ದಿಗ್ವಿಜಯ್ ಸಿಂಗ್

ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಬಾಬ್ರಿ ಮಸೀದಿಯ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ಮಸೀದಿ ಧ್ವಂಸವನ್ನು ತಡೆಯಬಹುದಿತ್ತು ಎಂದು ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸಕ್ಕೆ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ: ದಿಗ್ವಿಜಯ್ ಸಿಂಗ್
ಬಾಬ್ರಿ ಮಸೀದಿ ಧ್ವಂಸಕ್ಕೆ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ: ದಿಗ್ವಿಜಯ್ ಸಿಂಗ್
Updated on: 
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಬಾಬ್ರಿ ಮಸೀದಿಯ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ಮಸೀದಿ ಧ್ವಂಸವನ್ನು ತಡೆಯಬಹುದಿತ್ತು ಎಂದು ಹೇಳಿದ್ದಾರೆ. 
Ascetic Games: Sadhus, Akharas and the Making of the Hindu Vote ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಾಬ್ರಿ ಮಸೀದಿ ಧ್ವಂಸವನ್ನು ಕಾಂಗ್ರೆಸ್ ತಡೆಯಲಿಲ್ಲ,  ಅಂದಿನ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಇದಕ್ಕೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಆಂತರಿಕ ಘಟನೆಗಳು ನನಗೆ ತಿಳಿದಿಲ್ಲ. ಆದರೆ ಈ ಘಟನೆ ನಡೆಯಲು ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ ಎಂಬುದು ವಾಸ್ತವ, ಇದಕ್ಕಾಗಿ ನನಗೆ ತಪ್ಪಿತಸ್ಥ ಭಾವನೆ ಇದೆ ಎಂದು ಹೇಳಿದ್ದಾರೆ. 
ಸೇನೆ ಹಾಗೂ ಕೇಂದ್ರ ಪಡೆಗಳನ್ನು ಕಳಿಸುವ ಮೂಲಕ ಬಾಬ್ರಿ ಮಸೀದಿ ಧ್ವಂಸಗೊಳ್ಳದಂತೆ ಕಾಂಗ್ರೆಸ್ ಎಚ್ಚರ ವಹಿಸಬಹುದಿತ್ತು ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com