"ರಾಜ್ಯಪಾಲರ ಆಡಳಿತವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೆ ತಂದಾಗಿನಿಂದ, ರಾಜ್ಯದ ಆಡಳಿತ ನಿರ್ವಾಹಕರು ಕೇಂದ್ರದೊಡನೆ ನೇರ ಸಂಪರ್ಕದಲ್ಲಿದ್ದಾರೆ., ಇದರಿಂದಾಗಿ ಉತ್ತಮ ಆಡಳಿತದ ಪರಿಣಾಮಗಳನ್ನು ನಾವಿಂದು ಕಾಣುತ್ತಿದ್ದೇವೆ.
"370 ನೇ ವಿಧಿ ಜಮ್ಮು, ಕಾಶ್ಮೀರ ಮತ್ತು ಲಡಾಖ್ ಜನರ ಮೇಲೆ ಹೇಗೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬುದರ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಮತ್ತು ಆಶ್ಚರ್ಯಕರ ಸಂಗತಿಯೆಂದರೆ, ಈ ವಿಧಿಯು ಜನರಿಗೆ ಹೇಗೆ ಪ್ರಯೋಜನವನ್ನು ನೀಡಿತು ಎಂಬುದನ್ನು ಯಾರೂ ನಿಜವಾಗಿಯೂ ಹೇಳಲು ಸಾಧ್ಯವಾಗಲಿಲ್ಲ" ಎಂದು ಅವರು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಜನರಿಗೆ ತಮ್ಮ ಸ್ಥಳೀಯ ಪ್ರತಿನಿಧಿಗಳನ್ನು ಮೊದಲಿನಂತೆಯೇ ಆಯ್ಕೆ ಮಾಡುವುದಕ್ಕೆ ಅವಕಾಶವಿರಲಿದೆ ಎಂದು ಮೋದಿ ಹೇಳಿದ್ದಾರೆ.
"ಅವರು ಮುಕ್ತ ಮತ್ತು ನ್ಯಾಯಯುತವಾದ ಪಂಚಾಯತ್ ಚುನಾವಣೆಗಳನ್ನುಕಾಣಲಿದ್ದಾರೆ. ಅದೇ ರೀತಿ ವಿಧಾನಸಭಾ ಚುನಾವಣೆಗಳು ಸಹ ನಡೆಯಲಿವೆ. ಎರಡು-ಮೂರು ದಶಕಗಳಿಂದ ಬಾಕಿ ಇರುವ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಅನ್ನು ನೇಮಕ ಮಾಡುವಂತೆ ನಾನು ರಾಜ್ಯಪಾಲರನ್ನು ಒತ್ತಾಯಿಸುತ್ತೇನೆ" ಎಂದು ಪ್ರಧಾನಿ ಹೇಳಿದರು.
"ಜಮ್ಮು ಮತ್ತು ಕಾಶ್ಮೀರದ ಜನರಿಗೆ ಶೀಘ್ರದಲ್ಲೇ ಮುಕ್ತ ಮತ್ತು ನ್ಯಾಯಯುತ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಅವಕಾಶ ದೊರಕಲಿದೆ ಎಂದು ನಾನು ಭರವಸೆ ನೀಡುತ್ತೇನೆ" ಎಂದು ಅವರು ಹೇಳಿದರು.