ಸಾಂದರ್ಭಿಕ ಚಿತ್ರ
ದೇಶ
ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳುವ ಮೂಲಕ ಪಾಕಿಸ್ತಾನ ಜಗತ್ತಿಗೆ ಆತಂಕಕಾರಿ ಚಿತ್ರಣ ತೋರಿಸಿದೆ: ವಿದೇಶಾಂಗ ಸಚಿವಾಲಯ
ತನ್ನೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ತಗ್ಗಿಸುವ ಮೂಲಕ ಪಾಕಿಸ್ತಾನ ಉಭಯ ದೇಶಗಳ ನಡುವಿನ ಸಂಬಂಧಗಳ ಬಗ್ಗೆ ಆತಂಕಕಾರಿಯಾದ ಚಿತ್ರವನ್ನು ಜಗತ್ತಿಗೆ ...
ನವದೆಹಲಿ: ತನ್ನೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಳ್ಳುವ ಮೂಲಕ ಪಾಕಿಸ್ತಾನ ಉಭಯ ದೇಶಗಳ ನಡುವಿನ ಸಂಬಂಧಗಳ ಬಗ್ಗೆ ಆತಂಕಕಾರಿ ಪರಿಸ್ಥಿತಿ ಯನ್ನು ಜಗತ್ತಿಗೆ ಸಾರುವ ಪ್ರಯತ್ನ ಮಾಡುತ್ತಿದೆ ಎಂದು ಭಾರತ ಪ್ರತಿಪಾದಿಸಿದೆ.
ಸಂವಿಧಾನ ಹಿಂದೆಯೂ, ಇಂದು ಮತ್ತು ಮುಂದೆಯೂ ಸಾರ್ವಭೌಮದ ವಿಷಯವಾಗಿದ್ದು, ಸಂವಿಧಾನ ವಿಧಿ 370 ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು ಸಂಪೂರ್ಣವಾಗಿ ಭಾರತದ ಆಂತರಿಕ ವಿಷಯವಾಗಿದೆ, ಇದಕ್ಕೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಭಾರತದ ಹೈ ಕಮಿಷನರ್ ನ್ನು ವಾಪಸ್ ಕಳುಹಿಸುವ ನಿರ್ಧಾರ ಪ್ರಕಟಿಸಿರುವ ಪಾಕಿಸ್ತಾನದ ಕ್ರಮದ ಬಗ್ಗೆ ಭಾರತಕ್ಕೆ ವಿಷಾದವಿದೆ. ಪಾಕಿಸ್ತಾನ ತನ್ನ ನಿರ್ಧಾರವನ್ನು ಪರಾಮರ್ಶಿಸಿ ರಾಜತಾಂತ್ರಿಕ ಸಂವಹನಕ್ಕೆ ಸಂಬಂಧಿಸಿದ ಸಾಮಾನ್ಯ ಮಾರ್ಗಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಸಚಿವಾಲಯ ಹೇಳಿದೆ.
ಜಮ್ಮು -ಕಾಶ್ಮೀರದಲ್ಲಿ ಬೆಳವಣಿಗೆಗೆ, ಹೆಚ್ಚಿನ ಅವಕಾಶಗಳನ್ನು ವಿಸ್ತರಿಸುವುದನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ