ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಇಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಈ ಸಂದರ್ಭದಲ್ಲಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ....
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಈ ಸಂದರ್ಭದಲ್ಲಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಹಾಗೂ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಬಗ್ಗೆ ಸರ್ಕಾರದ ನಿರ್ಧಾರಗಳನ್ನು ವಿವರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 27 ರಂದು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅವರು ರಾಷ್ಟ್ರವನ್ನು ಉದ್ದೇಶಿಸಿ ಕೊನೆಯ ಬಾರಿ ಮಾತನಾಡಿದ್ದು ಆ ವೇಳೆ ಭಾರತವು ವೈರಿ ರಾಷ್ಟ್ರಗಳ ಉಪಗ್ರಹಗಳನ್ನು ಬಾಹ್ಯಾಕಾಶದಲ್ಲೇ ಹೊಡೆದುರುಳಿಸಬಲ್ಲ ಉಪಗ್ರಹ ವಿರೋಧಿ ಕ್ಷಿಪಣಿ (ಎ-ಸ್ಯಾಟ್) ಸಾಮರ್ಥ್ಯ ಪಡೆದುಕೊಂಡಿರುವುದಾಗಿ ಘೋಷಿಸಿದ್ದರು.
ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಿರ್ಣಯವನ್ನು ಸಂಸತ್ತು ಮಂಗಳವಾರ ಅಂಗೀಕರಿಸಿದೆ.
ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ. ಸ್ವಾತಂತ್ರ್ಯ ದಿನದಂದು ಪ್ರಧಾನ ಮಂತ್ರಿಯವರು ಕೆಂಪು ಕೋಟೆಯ ಪ್ರಾಂಗಣದಿಂಡ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವ ಕೆಲವೇ ದಿನಗಳ ಮುನ್ನ ಈ ಉದ್ದೇಶಿತ ಭಾಷಣ ಮಾಡಲಾಗುತ್ತಿದೆ.
370 ನೇ ವಿಧಿ ರದ್ದು : ಗೆಜೆಟ್ ಅಧಿಸೂಚನೆ ಪ್ರಕಟ
ಈ ನಡುವೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ಅನುಚ್ಛೇದವನ್ನು ರದ್ದುಗೊಳಿಸಿರುವುದಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಘೋಷಿಸಿದ್ದಾರೆ.
ಕಾನೂನು ಮತ್ತು ನ್ಯಾಯ ಸಚಿವಾಲಯ ಈ ಸಂಬಂಧ ಗೆಜೆಟ್ ಪ್ರಕಟಣೆ ಹೊರಡಿಸಿದೆ. ಸಂಸತ್ತಿನ ಉಭಯ ಸದನಗಳು ಈ ಸಂಬಂಧ ನಿರ್ಣಯ ಅಂಗೀಕರಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com