ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ‘ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಅಸ್ಸಾಂ ಹಾಗೂ ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಲಕ್ಷಾಂತರ ಜನ ನೆರೆಯಲ್ಲಿ ಸಿಲುಕಿದ್ದಾರೆ ಇಲ್ಲವೆ ಸ್ಥಳಾಂತರಗೊಂಡಿದ್ದಾರೆ. ಆದ್ದರಿಂದ ನಾನು ಎಲ್ಲಾ ನೆರೆ ಪೀಡಿತ ಪ್ರದೇಶಗಳ ಕಾಂಗ್ರೆಸ್ ಕಾರ್ಯಕರ್ತರು ಸಂಕಷ್ಟದಲ್ಲಿರುವರಿಗೆ ಅಗತ್ಯ ನೆರವು ಒದಗಿಸಬೇಕು. ಪ್ರವಾಹ ಪರಿಸ್ಥಿತಿ ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುವುದಾಗಿ ’ ತಿಳಿಸಿದ್ದಾರೆ.