BJP's Jaitley admitted to AIIMS hospital, PM Modi, Amit Shah visits
BJP's Jaitley admitted to AIIMS hospital, PM Modi, Amit Shah visits

ಜೇಟ್ಲಿ ಆರೋಗ್ಯದಲ್ಲಿ ಮತ್ತೆ ಏರುಪೇರು, ಏಮ್ಸ್ ಗೆ ದಾಖಲು, ಪ್ರಧಾನಿ ಮೋದಿ, ಅಮಿತಾ ಶಾ ಭೇಟಿ

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ ಮತ್ತು ಭಾರತದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ದೆಹಲಿ ಏಮ್ಸ್ ಗೆ ದಾಖಲಿಸಲಾಗಿದ್ದು, ಮೂಲಗಳ ಪ್ರಕಾರ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರ ಕುಟುಂಬದ ಮೂಲಗಳು, ಏಮ್ಸ್‌ನಲ್ಲಿ ಅರುಣ್‌ ಜೇಟ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ತಿಳಿಸಿದ್ದಾರೆ.

ಇನ್ನು ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯ ಪೀಡಿತರಾಗಿರುವ ಅರುಣ್ ಜೇಟ್ಲಿ ಅವರು ಇತ್ತೀಚೆಗಷ್ಟೇ ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದರು. ಅನಾರೋಗ್ಯದ ಕಾರಣಕ್ಕೇ ಅವರು, ಎನ್ ಡಿಎ ಸರ್ಕಾರದಲ್ಲೂ ಅವರು ಸಚಿವ ಸ್ಥಾನ ನಿರಾಕರಿಸಿದ್ದರು. 

ಆದರೆ ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಉಸಿರಾಟದ ತೊಂದರೆ ಅನುಭವಿಸಿದ ಅವರನ್ನು ಕೂಡಲೇ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ. ಆದರೆ ನಿರಂತರ ನಿಗಾ ಇಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹೃದ್ರೋಗ ಹಾಗೂ ಇತರೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ. ಅರುಣ್‌ ಜೇಟ್ಲಿ ಅವರಿಗೆ ತುರ್ತು ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ, ಅಮಿತ್ ಶಾ ಭೇಟಿ
ಇನ್ನು ಜೇಟ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿರುವ ದೆಹಲಿ ಏಮ್ಸ್ ಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.
 

Related Stories

No stories found.

Advertisement

X
Kannada Prabha
www.kannadaprabha.com