ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ಗೊಂದಲಕ್ಕೆ ಇಂದು ತೆರೆ: ಯಾರಾಗಬಹುದು ಹೊಸ ಸಾರಥಿ?, ಇಲ್ಲಿದೆ ಮಾಹಿತಿ

ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ತುರ್ತು ನೇಮಕಾತಿ ನಡೆಯಬೇಕಿದೆ. ಬಹುದಿನಗಳಿಂದ ಬಾಕಿ ಉಳಿದಿರುವ ಅಧ್ಯಕ್ಷರ ಆಯ್ಕೆ ಗೊಂದಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. 
ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ಗೊಂದಲಕ್ಕೆ ಇಂದು ತೆರೆ: ಯಾರಾಗಬಹುದು ಹೊಸ ಸಾರಥಿ?, ಇಲ್ಲಿದೆ ಮಾಹಿತಿ

ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ತುರ್ತು ನೇಮಕಾತಿ ನಡೆಯಬೇಕಿದೆ. ಬಹುದಿನಗಳಿಂದ ಬಾಕಿ ಉಳಿದಿರುವ ಅಧ್ಯಕ್ಷರ ಆಯ್ಕೆ ಗೊಂದಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. 


ಜುಲೈ ನಲ್ಲಿ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ.10 ರಂದು ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಯಲಿದ್ದು, ಹೊಸ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. 


ಅಭಿಷೇಕ್ ಮನು ಸಿಂಘ್ವಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಸಭೆ ಬಗ್ಗೆ ಟ್ವೀಟ್ ಮಾಡಿದ್ದು,  ಅಧ್ಯಕ್ಷರ ಆಯ್ಕೆಯಲ್ಲಿನ ವಿಳಂಬ ಉಂಟಾಗುತ್ತಿದೆ. ಸದ್ಯಕ್ಕೆ ತಾತ್ಕಾಲಿಕವಾಗಿ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಾಗಲಿದ್ದು, ಕೆಲವು ಸಮಯದ ಚುನಾವಣೆ ಮೂಲಕ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಸುಳಿವು ನೀಡಿದೆ. 


ಕಾಂಗ್ರೆಸ್ ನಾಯಕರು ಸಿದ್ಧಪಡಿಸಿದ ಪಟ್ಟಿಯಲ್ಲಿ ಕೇಂದ್ರ ಮಾಜಿ ಸಚಿವ ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ಕಾಂಗ್ರೆಸ್ ನಾಯಕ ಜ್ಯೋತಿರಾದುತ್ಯ ಸಿಂಧಿಯಾ ಹೆಸರು ಮುಂಚೂಣಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com