ಸೋನಿಯಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ:  ಅಮರೀಂದರ್ ಸಿಂಗ್ ಸಂತಸ

ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾಗಾಂಧಿ ನೇಮಕವಾಗಿರುವುದಕ್ಕೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.
ಸೋನಿಯಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ:  ಅಮರೀಂದರ್ ಸಿಂಗ್ ಸಂತಸ

ಚಂಡೀಗಡ: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾಗಾಂಧಿ ನೇಮಕವಾಗಿರುವುದಕ್ಕೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ಕಾಂಗ್ರೆಸ್ ಉತ್ತಮ ನಿರ್ಧಾರ ಕೈಗೊಂಡಿದೆ. ಅವರ ಅನುಭವ ಹಾಗೂ ಮಾರ್ಗದರ್ಶನ  ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. 

ಸೋನಿಯಾಗಾಂಧಿ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿರುವುದಕ್ಕೆ ಪಂಜಾಬ್ ಮತ್ತು ಹರಿಯಾಣದ ಇತರ ಕಾಂಗ್ರೆಸ್ ನಾಯಕರು ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೋನಿಯಾಗಾಂಧಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯನ್ನು ಸ್ವಾಗತಿಸುವುದಾಗಿ ಮಾಜಿ ಕೇಂದ್ರ ಸಚಿವ ಮನೀಷ್ ತಿವಾರಿ ಹೇಳಿದ್ದಾರೆ.

ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಪಕ್ಷ ಬಲವರ್ದನೆಯಾಗಲಿದೆ ಎಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ. 

19 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದ ಸೋನಿಯಾಗಾಂಧಿ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನವನ್ನು ಕಟ್ಟಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಪಕ್ಷದ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com