ಕಾಶ್ಮೀರ ಶಾಂತವಾಗಿಲ್ಲ; ಕೊನೆಗೂ ಮೌನ ಮುರಿದ ಗೃಹ ಇಲಾಖೆ

ಸೌರಾದಲ್ಲಿ ನಡೆದ ಕಲ್ಲು ತೂರಾಟ ಘಟನೆ ಬಳಿಕ ಕಣಿವೆ ರಾಜ್ಯದಲ್ಲಿ ಪ್ರತಿಭಟನೆ ತೀವ್ರ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಿಧಿ 370 ರದ್ದತಿ ಬಳಿಕ ಕಾಶ್ಮೀರದಲ್ಲಿ ಎಲ್ಲವೂ ಸಾಮಾನ್ಯವಾಗಿಲ್ಲ. ಕಾಶ್ಮೀರ ಶಾಂತವಾಗಿಲ್ಲ ಎಂದು ಹೇಳುವ ಮೂಲಕ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ಕೊನೆಗೂ ತನ್ನ ಮುರಿದಿದೆ.

ಈ ಹಿಂದೆ ಗೃಹ ಇಲಾಖೆಯ ಅಧಿಕಾರಿಗಳು ಕಾಶ್ಮೀರದಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಎಲ್ಲವೂ ಶಾಂತವಾಗಿದೆ ಎಂದು ಹೇಳಿದ್ದರು. ಆದರೆ ಸೌರಾದಲ್ಲಿ ನಡೆದಿದ್ದ ಪ್ರತಿಭಟನೆ ಮತ್ತು ಕಲ್ಲು ತೂರಾಟ ಪ್ರಕರಣವನ್ನು ಬಿಬಿಸಿ ಪತ್ರಿಕೆ ವರದಿ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಈ ಕುರಿತಂತೆ ಸ್ಪಷ್ಟನೆ ನೀಡಿದೆ. ಆಗಸ್ಟ್ 8ರಂದು ಸೌರಾದಲ್ಲಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಕಲ್ಲು ತೂರಾಟವಾಗಿತ್ತು ಎಂದು ಕೇಂದ್ರ ಗೃಹ ಇಲಾಖೆ ಒಪ್ಪಿಕೊಂಡಿದೆ.

ಅಲ್ಲದೆ ಈ ಘಟನೆ ಬಳಿಕ ಕಾಶ್ಮೀರದಲ್ಲಿ ಪ್ರತಿಭಟನೆಗಳ ಸಂಖ್ಯೆ ಹೆಚ್ಚಾಗಿದ್ದು, ಬಕ್ರೀದ್ ಹಬ್ಬದ ನಿಮಿತ್ತ ಪ್ರಾರ್ಥನೆಗಾಗಿ ಬಂದಿದ್ದ ನೂರಾರು ಮಂದಿ ಸಮಯ ಸಿಕ್ಕಾಗಲೆಲ್ಲ ಪ್ರತಿಭಟನೆ ನಡೆಸಿದ್ದಾರೆ. ಈ ಪೈಕಿ ಕಲ್ಲು ತೂರಾಟದ ಪ್ರಕರಣಗಳೂ ಕೂಡ ಅಲ್ಲಲ್ಲಿ ಕೇಳಿ ಬಂದಿದೆ. ಅಂತೆಯೇ ಸೇನಾಪಡೆಗಳ ಮೇಲೂ ಅಪ್ರಚೋದಿತ ಕಲ್ಲು ತೂರಾಟದಾಳಿಯಾಗಿದೆ ಎಂದು ಗೃಹ ಇಲಾಖೆ ಹೇಳಿದೆ.

ಈ ಕುರಿತಂತೆ ಗೃಹ ಇಲಾಖೆ ಟ್ವೀಟ್ ಮಾಡಿದ್ದು, ಕಾಶ್ಮೀರದ ಎಲ್ಲ ಪರಿಸ್ಥಿತಿಯನ್ನೂ ನಿಭಾಯಿಸಲು ಭದ್ರತಾ ಪಡೆಗಳು ಸರ್ವಸನ್ನದ್ಧವಾಗಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com