ಉತ್ತರ ಭಾರತದಲ್ಲಿ ಮೇಘ ಸ್ಫೋಟ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಗಂಗಾ-ಯಮುನಾ

ನೆರೆ ಹೊರೆಯ ರಾಜ್ಯಗಳಲ್ಲಿ ಅಪಾರ ಪ್ರಮಾಣ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಗಂಗಾ, ಯಮುನಾ ಮತ್ತು ಗಾಗ್ರಾ ಸೇರಿದಂತೆ ಉತ್ತರ ಪ್ರದೇಶದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು
ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಲಕ್ನೋ: ನೆರೆ ಹೊರೆಯ ರಾಜ್ಯಗಳಲ್ಲಿ ಅಪಾರ ಪ್ರಮಾಣ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಗಂಗಾ, ಯಮುನಾ ಮತ್ತು ಗಾಗ್ರಾ ಸೇರಿದಂತೆ ಉತ್ತರ ಪ್ರದೇಶದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.

ಕೇಂದ್ರ ಜಲ ಆಯೋಗದ ಪ್ರಕಾರ, ಬದೌನ್ ನಲ್ಲಿ ಗಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಇದರ ಜೊತೆಗೆ ಶಾರದಾ ಗಾಗ್ರಾ ನದಿಗಳು ಕೂಡ  ಉತ್ತರ ಪ್ರದೇಶದಲ್ಲಿ ಅಪಾಯ ಮಟ್ಟ ಮೀರಿವೆ,

ಕಲ್ಪಿಯಲ್ಲಿ ಯಮುನಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು 12 ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ. ಹೀಗಾಗಿ ಕಾರಿಫ್ ಬೆಳೆ ಸಂಪೂರ್ಣವಾಗಿ ಹಾಳಾಗಿದೆ,. ಹರ್ಯಾಣದ ಹತಿನಿ ಕುಂಡ್  ಬ್ಯಾರೇಜ್ ನಿಂದ ನೀರನ್ನು ಹೊರ ಬಿಟ್ಟ ಪರಿಣಾಮ ಯಮುನಾ ನದಿ ನೀರಿನ ಪ್ರಮಾಣ ಹೆಚ್ಚಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com