ಚಿದಂಬರಂ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ
ಚಿದಂಬರಂ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ

ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ, ಚಿದಂಬರಂ ದೆಹಲಿ ನಿವಾಸಕ್ಕೆ ಮತ್ತೆ ಸಿಬಿಐ ಅಧಿಕಾರಿಗಳ ದೌಡು!

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಅವರ ದೆಹಲಿ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಅವರ ದೆಹಲಿ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ನಿನ್ನೆ ಸಿಬಿಐ ಅಧಿಕಾರಿಗಳು ದೆಹಲಿ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಚಿದಂಬರಂ ನಾಪತ್ತೆಯಾಗಿದ್ದರು. ಇದೀಗ ಇಂದು ಬೆಳಗ್ಗೆ ಮತ್ತೆ ಅಧಿಕಾರಿಗಳು ಚಿದಂಬರಂ ಅವರ ದೆಹಲಿ ನಿವಾಸಕ್ಕೆ ಆಗಮಿಸಿದ್ದು, ಶೋಧ ನಡೆಸಿದ್ದಾರೆ.

ನಿನ್ನೆ ದೆಹಲಿ ಹೈ ಕೋರ್ಟ್ ಪಿ.ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆಯೇ ಇಡಿ (ಜಾರಿ ನಿರ್ದೇಶನಾಲಯ) ಮತ್ತು ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆಗೆ ಬಂದಿದ್ದರು. ಆದರೆ ಚಿದಂಬರಂ ಅಲ್ಲಿ ಇರಲಿಲ್ಲ. 6:30 ಕ್ಕೆ ಮನೆಗೆ ಬಂದ ಅಧಿಕಾರಿಗಳು 10 ನಿಮಿಷಗಳ ನಂತರ ಅಲ್ಲಿಂದ ವಾಪಸ್ ತೆರಳಿದ್ದಾರೆ. ಸಿಬಿಐ ಅಧಿಕಾರಿಗಳು ಬಂದು ಹೋದ ಬೆನ್ನಲ್ಲೇ 7:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳೂ ಸಹ ಚಿದಂಬರಂ ಮನೆಗೆ ಬಂದಿದ್ದಾರೆ. 

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆಯೇ ಚಿದಂಬರಂ ಬಂಧನದಿಂದ ರಕ್ಷಣೆ ಪಡೆಯುವುದಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com